ಧರ್ಮಸ್ಥಳ: ಒಂದು ದಿನದ ಮಕ್ಕಳ ಶಿಬಿರ

ಧರ್ಮಸ್ಥಳ: ಆದಿದ್ರಾವಿಡ ಸಮಾಜ ಸೇವಾ ಸಂಘ ಧರ್ಮಸ್ಥಳ ವಲಯ ಘಟಕದ ಆಶ್ರಯದಲ್ಲಿ ನಡೆಸಲ್ಪಡುತ್ತಿರುವ ಟ್ಯೂಷನ್ ತರಗತಿಯ ವಿದ್ಯಾರ್ಥಿಗಳಿಗಾಗಿ ಒಂದು ದಿನದ ‘ಮಕ್ಕಳ ಶಿಬಿರ’ ಕಾರ್ಯಕ್ರಮ ಜ.20 ರಂದು ಅಶೋಕನಗರದ ಸೂರ್ಯಭವನದಲ್ಲಿ ಜರುಗಿತು.
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನಕ್ಕೊಳಪಟ್ಟ ಮುಂಡಾಜೆಯ ಸರಸ್ವತಿ ಆಂಗ್ಲಮಾಧ್ಯಮ ಶಾಲೆಯ ಸಹಶಿಕ್ಷಕ ಕೃಷ್ಣಪ್ಪ ಎಂ.ಕೆ.ಯವರು ಕಾರ್ಯಕ್ರಮ ಉದ್ಘಾಟಿಸಿ ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ಸಮಾಜದಲ್ಲಿ ಎಲ್ಲರೊಂದಿಗೆ ಸಮಾನವಾಗಿ ಬದುಕಲು ಸಾಧ್ಯವಿದೆ. ಆದ್ದರಿಂದ ವಿದ್ಯಾರ್ಥಿ ದೆಸೆಯಲ್ಲೇ ಉತ್ತಮ ಗುರಿಯನ್ನು ಇಟ್ಟುಕೊಂಡು ಆ ಗುರಿಯ ಸಾಧನೆಗಾಗಿ ಶ್ರಮಪಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಅಶೋಕನಗರ ಶ್ರೀ ಸತ್ಯಸಾರಮನಿ ದೈವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಖರ್ ವಿ.ಯವರು ಅತಿಥಿಗಳಾಗಿ ಭಾಗವಹಿಸಿ ವಿದ್ಯೆ ಇಲ್ಲದವನು ಎಲ್ಲದಕ್ಕೂ ಇತರರನ್ನು ಅವಲಂಬಿಸಬೇಕಾಗುತ್ತದೆ, ವಿದ್ಯೆಯಿದ್ದಲ್ಲಿ ಮಾತ್ರ ಸ್ವಾವಲಂಬಿಯಾಗಿ ಬದುಕಬಹುದು ಎಂದು ಹೇಳಿ ಶುಭ ಹಾರೈಸಿದರು.
ವಲಯ ಘಟಕದ ಅಧ್ಯಕ್ಷ ಶೇಖರ್ ಧರ್ಮಸ್ಥಳ ಅಧ್ಯಕ್ಷತೆ ವಹಿಸಿದ್ದರು. ಆದಿದ್ರಾವಿಡ ಸಮಾಜ ಸೇವಾ ಸಂಘದ ಪದಾಧಿಕಾರಿಗಳು, ಮಹಿಳಾ ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಕಾರ್ಯಕ್ರಮಕ್ಕೆ ಸಹಕರಿಸಿದರು.
ಆದಿದ್ರಾವಿಡ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಸುನೀತಾ ಕಾರ್ಯಕ್ರಮ ನಿರ್ವಹಿಸಿ, ರಾಘವ ಡಿ. ಸ್ವಾಗತಿಸಿದರು. ಟ್ಯೂಷನ್ ಶಿಕ್ಷಕಿ ಕು| ಹೇಮಾ ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ಒಳಾಂಗಣ ಆಟಗಳನ್ನು ಆಡಿಸಿ, ಕೆಲವು ಸ್ಪರ್ಧೆಗಳನ್ನು ನಡೆಸಿ ಬಹುಮಾನ ವಿತರಿಸಲಾಯಿತು.1 ರಿಂದ 7ನೇ ತರಗತಿ ವರೆಗಿನ 45 ವಿದ್ಯಾರ್ಥಿಗಳು ಶಿಬಿರದಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.