ಕಳೆಂಜ:ಶ್ರೀ ಸದಾಶಿವೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

ಕಳೆಂಜ ಗ್ರಾಮದ ಸುಮಾರು 800 ವರ್ಷಗಳ ಪುರಾತನ ಇತಿಹಾಸವುಳ್ಳ ಶ್ರೀ ಸದಾಶಿವೇಶ್ವರ ದೇವರ ಜಾತ್ರಾ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜರುಗಿತ್ತು. ಜ.22 ರಂದು ಬೆಳಿಗ್ಗೆ ಊರ ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ ನಡೆಯಿತು. ನಂತರ ದೇವರಿಗೆ ಏಕಾದಶ ರುದ್ರಾಭಿಷೇಕ, 108 ಸಿಯಾಳಾಭಿಷೇಕ, ಮಹಾಪೂಜೆ ತದನಂತರ ಅನ್ನಸಂತರ್ಪಣೆ ನಡೆಯಿತು. ರಾತ್ರಿ ಮಹಾಪೂಜೆ ನಂತರ ಶ್ರೀ ದೇವರ ಬಲಿ ಹೊರಟು ವಸಂತಕಟ್ಟೆ ಪೂಜೆ, ಬೇಡಿ ಪ್ರದರ್ಶನ ಜರುಗಿತು .

ಇದೇ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು, ಊರಿನಲ್ಲಿ ವಿಶೇಷ ಸೇವೆಗೈದವರಿಗೆ ಗೌರವರ್ಪಣೆ ಹಾಗೂ ಮಾತೃವಂದನೆ ಕಾರ್ಯಕ್ರಮ ಮತ್ತು “ನಮ್ಮ ಕಲಾವಿದೆರ್ ನೆಲ್ಯಾಡಿ” ಇವರಿಂದ ‘ಮಗೆ ದುಬೈಡ್’ ನಾಟಕವು ಪ್ರದರ್ಶನಗೊಂಡಿತು .
ಜೆ.23 ರಂದು  ಬೆಳಗ್ಗೆ ಮಹಾಗಣಪತಿ ಹೋಮ, ಕಲಶಪೂಜೆ, ಕಲಶಾಭಿಷೇಕ, ದೈವಗಳಿಗೆ ತಂಬಿಲ ಸೇವೆ, ಮಹಾಪೂಜೆ ನಂತರ ಶ್ರೀ ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ಸೇವೆ ನಡೆದು ಜಾತ್ರಾ ಮಹೋತ್ಸವ ಸಂಪನ್ನಗೊಂಡಿತ್ತು.

    ಚಿತ್ರ ವರದಿ: ಗಣೇಶ್ ಕುಂದರ್ ಕಳೆಂಜ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.