ಕಾಶಿಬೆಟ್ಟು: ಟಿಪ್ಪರ್ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ: ಓರ್ವ ಸಾವು

ಚೆನ್ನಪ್ಪ ಅಂಚನ್

ಕಾಶಿಬೆಟ್ಟು: ಇಲ್ಲಿಯ ಬೆಳ್ತಂಗಡಿ -ಉಜಿರೆ ಮಧ್ಯೆ ಕೊಯ್ಯೂರು ಕ್ರಾಸ್ ಬಳಿ ಟಿಪ್ಪರ್ ಮತ್ತು ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು(ಜ.25) ನಡೆದಿದೆ.
ಈ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಪಡಂಗಡಿ ಬೋಳ ನಿವಾಸಿ ಚೆನ್ನಪ್ಪ ಅಂಚನ್(67.ವ ) ಮೃತಪಟ್ಟಿದ್ದಾರೆ. ಈಗಾಗಲೇ ಮೃತ ಶರೀರವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ತಕ್ಷಣ ಬೆಳ್ತಂಗಡಿ ಪೊಲೀಸರು ಹಾಗೂ ಸಂಚಾರಿ ವಿಭಾಗದ ಪೊಲೀಸರು ಘಟನಾ  ಸ್ಥಳಕ್ಕಾಗಮಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.