ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 70ನೇ ಗಣರಾಜ್ಯೋತ್ಸವ ದಿನಾಚರಣೆ

ಧ್ವಜಾರೋಹಣವನ್ನು ಪ್ರಭಾರ ತಹಶಿಲ್ದಾರ ಗಣಪತಿ ಶಾಸ್ತ್ರಿ ನೆರವೇರಿಸಿದರು.
ಶಾಸಕ ಹರೀಶ್ ಪೂಂಜರಿಂದ ಅಧ್ಯಕ್ಷೀಯ ಭಾಷಣ

ಮುಖ್ಯ ಭಾಷಣಾಕಾರರಾಗಿ ಉಪನ್ಯಾಸಕ ಕೇಶವ ಬಂಗೇರ ಉಪಸ್ಥಿತರಿದ್ದರು.

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಇದರ ಆಶ್ರಯದಲ್ಲಿ 70ನೇ ಗಣರಾಜ್ಯೋತ್ಸವ ದಿನಾಚರಣೆ-2019 ಮಿನಿವಿಧಾನ ಸೌಧ ಆವರಣದಲ್ಲಿ ಆಚರಿಸಲಾಯಿತು. ಧ್ವಜಾರೋಹಣವನ್ನು ತಹಶಿಲ್ದಾರ ಗಣಪತಿ ಶಾಸ್ತ್ರಿ ನೆರವೇರಿಸಿದರು. ಶಾಸಕ ಹರೀಶ್ ಪೂಂಜ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ತಾ.ಪಂ ಅಧ್ಯಕ್ಷೆ ಶ್ರೀಮತಿ ದಿವ್ಯಜ್ಯೋತಿ, ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ.ಸೆಬಾಸ್ಟಿನ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ, ರತ್ನವರ್ಮ ಜೈನ್, ನ.ಪಂ ಸದಸ್ಯರಾದ ಜಯಾನಂದ ಗೌಡ, ರಜನಿ ಕುಡ್ವ, ತುಳಸಿ ಕರುಣಾಕರ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಪ್ರಿಯಾ ಆಗ್ನೇಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮುಖ್ಯ ಭಾಷಣಾಕಾರರಾಗಿ ಗೇರುಕಟ್ಟೆ ಸ.ಪ.ಪೂ.ಕಾಲೇಜು ಉಪನ್ಯಾಸಕ ಕೇಶವ ಬಂಗೇರ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ನಂತರ  ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿತು. ದೇಶಭಕ್ತಿಯನ್ನು ಸಾರುವ ವಿವಿಧ ನೃತ್ಯ ಪ್ರದರ್ಶನ ಎಲ್ಲರ ಮನಸೂರೆಗೊಂಡಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.