ಸರಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಪ್ರಾರಂಭ : ಶಿಕ್ಷಕರ ಸಂಘದಿಂದ ಸ್ವಾಗತ

Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ: ರಾಜ್ಯದ 1 ಸಾವಿರ ಸರಕಾರಿ ಶಾಲೆಗಳಲ್ಲಿ ಅಂಗ್ಲಮಾಧ್ಯಮ ವಿಭಾಗ ಪ್ರಾರಂಭಿಸಿರುವುದನ್ನು ನಾವು ಸ್ವಾಗತಿಸುತ್ತೇವೆ. ನಾವೇನು ಆಂಗ್ಲಭಾಷಾ ವಿರೋಧಿಗಳಲ್ಲಿ. ಸ್ಪರ್ಧಾತ್ಮಕ ಯುಗದಲ್ಲಿ ಹೆತ್ತವರು ತಮ್ಮ ಮಕ್ಕಳಿಗೆ ಆಂಗ್ಲಭಾಷಾ ಶಿಕ್ಷಣ ಬೇಕು ಎಂದು ಬಯಸುವುದು ತಪ್ಪಲ್ಲ ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಶಿವಶಂಕರ ಭಟ್ ಹೇಳಿದ್ದಾರೆ.
ಜ. ೧೯ ರಂದು ಬೆಳ್ತಂಗಡಿ ವಾಣಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವಾರ್ಷಿಕ ಮಹಾಸಭೆ ಮತ್ತು ಶೈಕ್ಷಣಿಕ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಆಂಗ್ಲ ಭಾಷಾ ಶಿಕ್ಷಣ ಸರಕಾರಿ ಶಾಲೆಯಲ್ಲಿ ಪ್ರಾರಂಭವಾದರೆ ಸರಕಾರಿ ಶಾಲೆ ಸಬಲೀಕರಣವಾದಂತೆ. ಶಿಕ್ಷಕರು ತಮ್ಮಲ್ಲಿರುವ ಕೌಶಲ್ಯವನ್ನು ಪ್ರಾಮಾಣಿಕವಾಗಿ ಮಕ್ಕಳಿಗೆ ವರ್ಗಾವಣೆಮಾಡುವವರು. ಅವರ ಕೆಲಸದ ಒತ್ತಡಗಳನ್ನೂ ಸರಕಾರ ಮನಗಂಡು ಸ್ಪಂದಿಸಬೇಕು ಎಂದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.