ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಧಾರ್ಮಿಕ ಸಭಾ ಕಾರ್ಯಕ್ರಮ

ನ್ಯಾಯತರ್ಪು: ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ನಾಳ ಇದರ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜ.27 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಆಶೀರ್ವಚನ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಸಂತ ಮಜಲು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಧರ್ಮಸ್ಥಳ ಜಮಾ ಉಗ್ರಾಣ ಮುತ್ಸದ್ಧಿ ಬಿ.ಭುಜಬಲಿ, ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಸ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಧಾಕೃಷ್ಣ ನಾಕ್ ಎಲ್ನಾಡುಗುತ್ತು, ಪುಣೆ ಶ್ರೀ ಗುರುದೇವ ಸೇವಾ ಬಳಗದ ಕಾರ್ಯದರ್ಶಿ ರೋಹಿತ್ ಶೆಟ್ಟಿ ನಗ್ರಿಗುತ್ತು, ಉದ್ಯಮಿಗಳಾದ ಜನಾರ್ದನ ಗೌಡ ನಿರ್ಮುಡ, ಹೇಮಂತ್ ಕುಮಾರ್, ನ.ಪಂ ಸದಸ್ಯ ಜಯಾನಂದ ಗೌಡ, ಬೆಳ್ತಂಗಡಿ ಜಿ.ಪಂ ಇಂಜಿನಿಯರಿಂಗ್ ಉಪವಿಭಾಗ ಸಹಾಯಕ ಅಭಿಯಂತರರಾದ ಚೆನ್ನಪ್ಪ ಮೊಯಿಲಿ, ಕಳಿಯ ಗ್ರಾ.ಪಂ ಅಧ್ಯಕ್ಷ ಶರತ್ ಕುಮಾರ್, ಬೆಳ್ತಂಗಡಿ ಎಪಿಎಂಸಿ ಅಧ್ಯಕ್ಷ ಕೇಶವ ಬೆಳಾಲು, ನಾಳ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.