ಎಕೆಜಿ ಸೊಸೈಟಿಯಿಂದ ಶ್ರಮಶಕ್ತಿ ಸ್ವಸಹಾಯ ಗುಂಪು ಸದಸ್ಯರಿಗೆ ಮಾಹಿತಿ ಕಾರ್ಯಾಗಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಸ್ವಸಹಾಯ ಗುಂಪುಗಳ ಸದಸ್ಯರು ಮಾಹಿತಿ ತಂತ್ರಜ್ಞಾನವನ್ನು ಬಳಸಿ ತಮ್ಮನ್ನು ಇನ್ನಷ್ಟು ಉನ್ನತೀಕರಣಗೊಳ್ಳಬಹುದು ಎಂದು ಮಾಹಿತಿ ತಂತ್ರಜ್ಞ, ಕರ್ನಾಟಕ ಪ್ರಾಂತ ರೈತ ಸಂಘ ರಾಜ್ಯ ಜಂಟಿ ಕಾರ್ಯದರ್ಶಿ ಎಚ್.ಆರ್ ನವೀನ್ ಕುಮಾರ್ ಹೇಳಿದರು.
ಜ. 26  ರಂದು ಅಂಬೇಡ್ಕರ್ ಭವನದಲ್ಲಿ ನಡೆದ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘ ಬೆಳ್ತಂಗಡಿ ಇದರ ಶ್ರಮಶಕ್ತಿ ಸ್ವಸಹಾಯ ಗುಂಪು ಸದಸ್ಯರ ಮಾಹಿತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡುತ್ತಿದ್ದರು.
ಸರ್ಕಾರದ ಸವಲತ್ತುಗಳು, ಸ್ವಸಹಾಯ ಗುಂಪುಗಳ ಮಾಹಿತಿಗಳನ್ನು ನೇರವಾಗಿ ಪಡೆದು ಅದರ ಸದುಪಯೋಗ ಪಡಿಸಿಕೊಳ್ಳಲು ಇಂದಿನ ದಿನಗಳಲ್ಲಿ ಮಾಹಿತಿ ತಂತ್ರಜ್ಞಾನ ಅಗತ್ಯವಿದೆ. ಅದನ್ನು ಉಪಯೋಗಿಸಿಕೊಂಡರೆ ಮಹಿಳೆಯರು ಇನ್ನಷ್ಟು ಉನ್ನತ ಮಟ್ಟಕ್ಕೆ ಏರಬಹುದು ಎಂದರು.
ಸಾಮಾಜಿಕ ಜಾಲತಾಣದಲ್ಲಿ ಜನರನ್ನು ದಿಕ್ಕುತಪ್ಪಿಸುವ ವಿಚಾರಗಳೆ ಹೆಚ್ಚು ಚರ್ಚೆಯಾಗುತ್ತಿದ್ದು ಇಂತಹ ವೇದಿಕೆಗಳನ್ನು ಜನಪರವಾಗಿಯೂ ಬಳಸಿಕೊಳ್ಳಬೇಕು ಎಂದರು.
ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ವ್ಯವಸ್ಥಾಪಕ ಉಮೇಶ್, ಇಂದು ಜಿಲ್ಲೆಯ ಜೀವನಾಡಿ ಬೀಡಿ ಕೈಗಾರಿಕೆ ಅವನತಿಯತ್ತ ಸಾಗುತ್ತಿರುವ ಈ ಸಂದರ್ಭದಲ್ಲಿ ಮಹಿಳೆಯರು ಸ್ವ ಉದ್ಯೋಗವನ್ನು ಆರಂಭಿಸುವ ನಿಟ್ಟಿನಲ್ಲಿ ನಮ್ಮ ಸ್ವಸಹಾಯ ಗುಂಪು ಎಲ್ಲಾ ಸಹಾಯ-ಸಹಕಾರ ನೀಡುತ್ತಿದ್ದು, ಅದರ ಸದುಪಯೋಗ ಪಡಿಸಿಕೊಳ್ಳಲು ಕರೆ ನೀಡಿದರು. ತಾ. ಪಂ. ಸಂಪನ್ಮೂಲ ಅಭಿವೃದ್ಧಿ ಅಧಿಕಾರಿ ಜಯಾನಂದ ಲಾಯಿಲ  ಮಾತನಾಡಿದರು.
ಅಧ್ಯಕ್ಷತೆಯನ್ನು ಸಂಗಾತಿ ಎಕೆಜಿ ಬೀಡಿ ಕಾರ್ಮಿಕರ ಗೃಹ ನಿರ್ಮಾಣ ಸಹಕಾರಿ ಸಂಘದ ಅಧ್ಯಕ್ಷ ಹರಿದಾಸ್ ಎಸ್. ಎಂ ವಹಿಸಿದ್ದರು.
ವೇದಿಕೆಯಲ್ಲಿ ಸಂಘದ ನಿರ್ದೇಶಕ, ನ್ಯಾಯವಾದಿ ಶಿವಕುಮಾರ್ ಎಸ್. ಎಂ, ಸುಕನ್ಯಾ ಎಚ್, ಶೇಖರ್  ಲಾಯಿಲ   ಉಪಸ್ಥಿತರಿದ್ದರು.
ಉಪನ್ಯಾಸಕ ಚಂದ್ರಶೇಖರ ಸರೋಳಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಜನಪದ ಕಲಾವಿದ ಎಚ್ ಕೃಷ್ಣಯ್ಯ ಲಾಯಿಲ    ಮತ್ತು ಪ್ರಶಾಂತ್ ಬೆಳ್ತಂಗಡಿ ಅವರಿಂದ ಜನಪದ ಗೀತೆಗಳ ಗಾಯನ ನಡೆಯಿತು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.