HomePage_Banner_
HomePage_Banner_
HomePage_Banner_

ಫೆ. 1: ಉಜಿರೆಯಲ್ಲಿ ಕುವೆಂಪು ವ್ಯಕ್ತಿತ್ವ ಮತ್ತು ಸಾಹಿತ್ಯ ವಿ.ವಿ. ಮಟ್ಟದ ವಿಚಾರಗೋಷ್ಠಿ

ಉಜಿರೆ: ಕುಪ್ಪಳ್ಳಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಆಶ್ರಯದಲ್ಲಿ ಫೆ. ಒಂದರಂದು ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ ಕನ್ನಡ ವಿಭಾಗದ ಸಹಯೋಗದೊಂದಿಗೆ ಕುವೆಂಪು ವ್ಯಕ್ತಿತ್ವ ಮತ್ತು ಸಾಹಿತ್ಯ ವಿಷಯದಲ್ಲಿ ಮಂಗಳೂರು ವಿಶ್ವ ವಿದ್ಯಾಲಯ ಮಟ್ಟದ ವಿಚಾರಗೋಷ್ಠಿ ಆಯೋಜಿಸಲಾಗಿದೆ. ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ವಿಚಾರಗೋಷ್ಠಿ ಉದ್ಘಾಟಿಸುವರು. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ, ಮಂಗಳೂರು ವಿ.ವಿ. ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯಸ್ಥ ಡಾ. ನಾಗಪ್ಪ ಗೌಡ ಶುಭಾಶಂಸನೆ ಮಾಡುವರು. ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಪ್ರೊ. ಟಿ.ಎನ್. ಕೇಶವ ಅಧ್ಯಕ್ಷತೆ ವಹಿಸುವರು. ವಿಚಾರಗೋಷ್ಟಿಯಲ್ಲಿ ಕುವೆಂಪು ಸಾಕ್ಷ್ಯ ಚಿತ್ರ ಪ್ರದರ್ಶನ ಮತ್ತು ಕರಿಸಿದ್ಧ ಕಥನ ಕವನ ರೂಪಕ ಪ್ರದರ್ಶನ ಕೂಡ ನಡೆಯಲಿದೆ ಎಂದು ಕನ್ನಡ ವಿಭಾಗದ ಮುಖ್ಯಸ್ಥ ಡಾ. ಬಿ.ಪಿ. ಸಂಪತ್ ಕುಮಾರ್ ಮತ್ತು ಸಂಯೋಜಕ ಡಾ. ಕೆ.ವಿ. ನಾಗರಾಜಪ್ಪ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.