ಕಾರುಣ್ಯ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Advt_NewsUnder_1
Advt_NewsUnder_1
Advt_NewsUnder_1

ಕಕ್ಕಿಂಜೆ: ಕಾರುಣ್ಯ ಆಂಗ್ಲ ಮಾಧ್ಯಮ ಶಾಲೆ ಕಕ್ಕಿಂಜೆ ಇಲ್ಲಿ ಗಣರಾಜ್ಯೋತ್ಸವ ಆಚರಣೆ ನಡೆಯಿತು. ಶಾಲಾ ಸಂಚಾಲಕ ಮುಹಮ್ಮದ್ ಕೆ ಅಧ್ಯಕ್ಷತೆ ವಹಿಸಿದ್ದರು. ಯುವ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಯುವ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಧ್ವಜಾರೋಹಣ ನಡೆಸಿದರು. ಈ ಸಂದರ್ಭ ಅಭಿನಂದನ್ ಅವರನ್ನು ಶಾಲಾ ವತಿಯಿಂದ ಸನ್ಮಾನಿಸಲಾಯಿತು. ಶಾಲಾ ಕಾರ್ಯದರ್ಶಿಯಾಗಿರುವ ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಡಿ. ಎ ರಹಿಮಾನ್, ಶಿಕ್ಷಕ ರಕ್ಷಕ ಸಂಘದ ಸದಸ್ಯ ಮುಸ್ತಫ ಕೆ, ಹಾಗೂ ಲೆತೀಫ್ ಉಪಸ್ಥಿತರಿದ್ದರು. ಪ್ರೌಢ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಚಂದ್ರಪ್ಪ ನಿರೂಪಿಸಿದರು.
ಪ್ರಾಥಮಿಕ ಶಾಲಾ ವಿಭಾಗದ ಮುಖ್ಯ ಶಿಕ್ಷಕ ಮಧು ಕೆ ಸ್ವಾಗತಿಸಿ ವಂದಿಸಿದರು

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.