ಬೆಳಾಲು ಅನಂತೋಡಿ ದೇವಸ್ಥಾನ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಶ್ರೀ ಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಯಂ.ವಿಜಯರಾಘವ ಪಡ್ವೆಟ್ನಾಯರ ಮಾರ್ಗದರ್ಶನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚಿಸಲಾಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು.

ಬೆಳಾಲು : ಇಲ್ಲಿಯ ಅನಂತೋಡಿಯಲ್ಲಿ ಜೀರ್ಣೋದ್ಧಾರಗೊಂಡು ಮೇ 11ರಿಂದ 19 ರವರೆಗೆ ಬ್ರಹ್ಮಕಲಶೋತ್ಸವ ನಡೆಯಲಿರುವ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಊರವರ ಸಮಾಲೋಚನಾ ಸಭೆ ಫೆ.3ರಂದು ದೇವಸ್ಥಾನದ ವಠಾರದಲ್ಲಿ ಜರಗಿತು.ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರ ಗೌರವಾಧ್ಯಕ್ಷತೆಯಲ್ಲಿ ನಡೆಯಲಿರುವ ದೇವರ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ನಡೆಯಲಿದ್ದು ಇದರ ಅಂಗವಾಗಿ ಸಮಿತಿ ರಚಿಸಲಾಗಿದ್ದು ಈ ಸಂದರ್ಭದಲ್ಲಿ ಶ್ರೀ ಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮ ಹಂಸ ಸ್ವಾಮೀಜಿ, ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಯಂ.ವಿಜಯರಾಘವ ಪಡ್ವೆಟ್ನಾಯರ ಮಾರ್ಗದರ್ಶನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ ರಚಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ ಮಾತನಾಡಿ ಶುಭ ಹಾರೈಸಿದರು. ಸಭೆಯಲ್ಲಿ ಆಡಳಿತ ಮೊಕ್ತೇಸರ ಬೆಳಾಲು ಗುತ್ತು ಜೀವಂಧರ್ ಕುಮಾರ್, ಜೀರ್ಣೋಧಾರ  ಸಮಿತಿಯ ಕಾರ್ಯಾಧ್ಯಕ್ಷ ಪಿ.ತಿಮ್ಮಪ್ಪ ಗೌಡ, ಕಾರ್ಯದರ್ಶಿ ದುರ್ಗಾಪ್ರಸಾದ್ ಅರ್ಚಕ ಗಿರೀಶ್ ಬಾರಿತ್ತಾಯ ಪಾರಲ, ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಅಧ್ಯಕ್ಷರು, ಸದಸ್ಯರುಗಳು, ಜೀರ್ಣೊದ್ಧಾರ ಸಮಿತಿಯ ಪದಾಧಿಕಾರಿಗಳು,ಸದಸ್ಯರುಗಳು,ಊರವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದು ಬ್ರಹ್ಮಕಲಶೋತ್ಸವ ಸಮಿತಿ ಮತ್ತು ಉಪ ಸಮಿತಿಗಳನ್ನು ಆಯ್ಕೆ ಮಾಡಲಾಯಿತು.
ಕಾರ್ಯಾಧ್ಯಕ್ಷರಾಗಿ ಮಾಜಿ ತಾ.ಪಂ ಅಧ್ಯಕ್ಷ ಎನ್.ಜತ್ತನ್ನ ಗೌಡ, ಅಧ್ಯಕ್ಷರಾಗಿ ಆನಂದ ಆಚಾರ್ಯ ಶಾಂತಾರಾಮ ಜ್ಯುವೆಲ್ಲರ್‍ಸ್, ಕೋಶಾಧಿಕಾರಿಯಾಗಿ ಉದಿತ್ ಕುಮಾರ್ ಜೈನ್, ಹಾಗೂ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು, ಈ ಸಂದರ್ಭದಲ್ಲಿ ಮಾಯಾ ಮಹಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹೆಚ್.ಪದ್ಮಗೌಡ ನಿವೃತ ಉಪ ತಹಸೀಲ್ದಾರ್ ಜಿ.ಸೋಮೇಗೌಡ, ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ಉಜಿರೆ ವಲಯದ ಮೇಲ್ಚಿಚಾರಕಿ ಅಶ್ವಿತಾ ಗ್ರಾ.ಪಂ ಉಪಾಧ್ಯಕ್ಷೆ ಜಯಲಕ್ಷ್ಮೀ, ಸದಸ್ಯರುಗಳಾದ ಸುರೇಂದ್ರ ಗೌಡ, ಸತೀಶ್ ಎಳ್ಳು ಗದ್ದೆ, ವಿಮಲಾ, ಕುಸುಮಾವತಿ, ಬೆಳಾಲು ಸೇ.ಸ ಸಂಘದ ನಿವೃತ್ತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪಿ.ರುಕ್ಮಯ್ಯ ಗೌಡ, ಸೆವಾ ಪ್ರತಿನಿಧಿ ಕು| ಆಶಾ ಇನ್ನಿತರ ಗಣ್ಯರು ಊರವರು ಉಪಸ್ಥಿತರಿದ್ದು ಸಲಹೆ ಸೂಚನೆ ನೀಡಿದರು.
ಶಿವಪ್ರಸಾದ್ ಕೆ ಕಾರ್ಯಕ್ರಮ ನಿರೂಪಿಸಿ ಜೀರ್ಣೊದ್ಧಾರ ಸಮಿತಿ ಕಾರ್ಯದರ್ಶಿ ಸದಾಶಿವ ಒಡಿಪ್ರೊಟ್ಟು ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.