ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಸಂಪನ್ನ

ಜಗದ್ಗುರು ಮಧ್ವಾಚಾರ್ಯ ಮೂಲಮಹಾಸಂಸ್ಥಾನ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀ ಪಾದಂಗಳವರು ಆಶೀರ್ವಚನ  ನೀಡಿದರು 

ಪಡಂಗಡಿ: ನಮ್ಮ ಮನದೊಳಗೆ ಭಕ್ತಿಯಿಂದ ಪೂಜೆ ಸಲ್ಲಿಸಿದರೆ ಮಾತ್ರ ದೇವರ ಅನುಗ್ರಹ ಲಭಿಸಲು ಸಾಧ್ಯ. ನಾವು ಸಂಪತ್ತಿದೆ ಎಂದು ಮೆರೆದಾಡಿದರೆ ದೇವರ ಅನುಗ್ರಹ ಸಿಗಲು ಸಾಧ್ಯವಿಲ್ಲ ಎಂದು ಜಗದ್ಗುರು ಮಧ್ವಾಚಾರ್ಯ ಮೂಲಮಹಾಸಂಸ್ಥಾನ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನತೀರ್ಥ ಶ್ರೀ ಪಾದಂಗಳವರು ತಿಳಿಸಿದರು.
ಅವರು ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ.2 ರಿಂದ 4ರ ವರೆಗೆ ಜರುಗಿದ ಜಾತ್ರಾಮಹೋತ್ಸವದ ಧಾರ್ಮಿಕ ಸಭಾಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು. ವೇದಿಕೆಯಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗಣೇಶ್ ಸುವರ್ಣ, ಪ್ರಧಾನ ಅರ್ಚಕ ರಘರಾಮ್ ಭಟ್ ಮಠ, ಕುವೆಟ್ಟು ಕ್ಷೇತ್ರದ ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ಪಡಂಗಡಿ ಗ್ರಾ.ಪಂ ಅಧ್ಯಕ್ಷೆ ಮೀನಾಕ್ಷಿ, ಉಪಾಧ್ಯಕ್ಷ ಸಂತೋಷ್ ಕುಮಾರ್ ಜೈನ್, ಜಾತ್ರಾ ಸಮಿತಿಯ ಗೌರವಾಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿ ಗುತ್ತು, ಅಧ್ಯಕ್ಷ ಸಂತೋಷ್ ಶೆಟ್ಟಿ ಪುರಿಪಟ್ಟ, ಪ್ರಧಾನ ಕಾರ್ಯದರ್ಶಿ ಸುಕೇಶ್ ಪೂಜಾರಿ ಓಡೀಲು ಉಪಸ್ಥಿತರಿದ್ದರು.
ಅಶ್ವಿತ್ ಎಂ ಓಡೀಲು ಸ್ವಾಗತಿಸಿ, ಯುವರಾಜ್ ಕಾರ್ಯಕ್ರಮ ನಿರೂಪಿಸಿ, ಚಂದ್ರಪ್ಪ ಧನ್ಯವಾದವಿತ್ತರು.
ಚಿತ್ರವರದಿ: ಮನು ಮದ್ದಡ್ಕ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.