ಫೆ.23: ಬೆಳ್ತಂಗಡಿಯಲ್ಲಿ ಬೃಹತ್ ಉದ್ಯೋಗ ಮೇಳ

ಬೆಳ್ತಂಗಡಿ: `ಯುವ ಸಂಕಿರಣ’ ತಾಲೂಕು ಸಮಿತಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ, ಉದ್ಯೋಗ ವಿನಿಮಯ ಕೇಂದ್ರ ಮಂಗಳೂರು ಇದರ ಸಹಕಾರದೊಂದಿಗೆ ಫೆ.23 ರಂದು ಬೆಳಿಗ್ಗೆ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರಿಗಾಗಿ ಬೃಹತ್ ಉದ್ಯೋಗ ಮೇಳನ್ನು ಆಯೋಜಿಸಲಾಗಿದೆ ಎಂದು ಯುವ ಸಂಕಿರಣ  ತಾಲೂಕು ಸಮಿತಿ  ಅಧ್ಯಕ್ಷ ಲಕ್ಷ್ಮಣ ಜಿ.ಎಸ್ ತಿಳಿಸಿದರು. ಅವರು  ಫೆ.8 ರಂದು ತಾಲೂಕು ಪತ್ರಿಕಾ ಭವನದಲ್ಲಿ  ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ  ಮಾತನಾಡಿದರು.

ಉದ್ಯೋಗಮೇಳವನ್ನು ಮಾಜಿ ಶಿಕ್ಷಣ ಸಚಿವರಾದ ಮಹೇಶ್ ರವರು ಉದ್ಘಾಟಿಸಲಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ ಹರೀಶ್ ಕುಮಾರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಗಣನೀಯ ಸಂಖ್ಯೆಯಲ್ಲಿ ವಿದ್ಯಾವಂತ ಯುವಜನತೆ ನಿರುದ್ಯೋಗದ ಸಮಸ್ಯೆಯಲ್ಲಿ ಬಳಳುತ್ತಿದೆ. ಈ ನಿಟ್ಟಿನಲ್ಲಿ ಬೆಳ್ತಂಗಡಿ ತಾಲೂಕಿನ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯರ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಲ್ಲಿ ನಮ್ಮ ಸಂಸ್ಥೆಯ ಅಳಿಲು ಸೇವೆ ಎಂಬಂತೆ ಬೃಹತ್ ಉದ್ಯೋಗ ಮೇಳ ಆಯೋಜಿಸುತ್ತಿದೆ. ವಿವಿಧ ಕಂಪನಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ಸುಮಾರು 2000 ಉದ್ಯೋಗ ಅವಕಾಶಗಳಿವೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ ಪಡೆದ ವಿದ್ಯಾರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಯುವ ಸಂಕೀರ್ಣ ಸಮಿತಿ ವಿನಂತಿಸಿಕೊಂಡಿದೆ.
ಅಭ್ಯರ್ಥಿಗಳು ಸ್ಥಳದಲ್ಲಿ ಅಥವಾ ಮುಂಚಿತವಾಗಿ ನೊಂದಾವಣೆ ಮಾಡಿಕೊಳ್ಳಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ಮೊ.8277072732 ಮತ್ತು 9449707187 ಸಂಪರ್ಕಿಸಬಹುದು.

ಪತ್ರಿಕಾಗೋಷ್ಠಿಯಲ್ಲಿ ಯುವ ಸಂಕಿರಣದ ಶೇಖರ್ ಮಾಲಾಡಿ, ಸಂತೋಷ್ ರೆಂಕೆದಗುತ್ತು, ಅಕ್ಷತ್ ಪಾಲೇದು, ಸಂದೀಪ್ ಉಪಸ್ಥಿತರಿದ್ದರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.