ತಾರೆದೊಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ತೆಂಕಕಾರಂದೂರು: ಬಳಂಜ ಗ್ರಾ.ಪಂ ವ್ಯಾಪ್ತಿಯ ತೆಂಕಕಾರಂದೂರು ಗ್ರಾಮದ ತಾರೆದೊಟ್ಟು ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಫೆ.8 ರಂದು ಜರುಗಿತು. ನೂತನ ಕಟ್ಟಡದ ಉದ್ಘಾಟನೆಯನ್ನು ಬಳಂಜ ಗ್ರಾ.ಪಂ.ಅಧ್ಯಕ್ಷೆ ಶ್ರೀಮತಿ ದೇವಕಿ ನೆರವೇರಿಸಿ, ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಅಳದಂಗಡಿ ಕ್ಷೇತ್ರದ ಜಿ.ಪಂ ಸದಸ್ಯರಾದ ಶೇಖರ್ ಕುಕ್ಕೇಡಿ, ಅಳದಂಗಡಿ ಕ್ಷೇತ್ರದ ತಾ.ಪಂ ಸದಸ್ಯೆ ವಿನುಷಾ ಪ್ರಕಾಶ್, ಶಿಶು ಅಭಿವೃದ್ಧಿ ಯೋಜನಾದಿಕಾರಿ ಪ್ರಿಯಾ ಆಗ್ನೇಸ್, ಬಳಂಜ ಗ್ರಾ.ಪಂ ಸದಸ್ಯರಾದ ಹೇಮಂತ್ ಜಯಶ್ರೀ, ಬಳಂಜ ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸುಧಾಮಣಿ ಜಿ., ಪೋಷಕರ ಸಮಿತಿ ಅಧ್ಯಕ್ಷ ಉದಯ ಕುಮಾರ್ ರಾವ್, ಅಂಗನವಾಡಿ ಕಾರ್ಯಕರ್ತೆ ಮನಿತಾ, ಬಾಲವಿಕಾಸ ಸಮಿತಿಯ ಶ್ರೀಮತಿ ಪೂರ್ಣಿಮಾ , ಅಂಗನವಾಡಿ ವಿದ್ಯಾರ್ಥಿಗಳು, ಪೋಷಕರು, ಗ್ರಾಮಸ್ಥರು ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.