HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ತುಂಬೆದಲೆಕ್ಕಿ: ಶಾಸಕರಿಂದ ಗ್ಯಾಸ್‌ಕಿಟ್ ವಿತರಣೆ

ಗುಂಡೂರಿ: ಭಾರತ ಸರಕಾರದ ಉಜ್ವಲ ಯೋಜನೆಯಡಿ ಫಲಾನುಭವಿ ಗ್ರಾಮಸ್ಥರಿಗೆ ಗ್ಯಾಸ್ ವಿತರಣೆ ಕಾರ್ಯಕ್ರಮ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನಾ ಮಂದಿರದಲ್ಲಿ ಜರಗಿತು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಫಲಾನುಭವಿಗಳಿಗೆ ಗ್ಯಾಸ್ ಕಿಟ್ ವಿತರಿಸಿದರು. ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್, ಕಾರ್ಯದರ್ಶಿ ಸೀತಾರಾಮ್, ಆರಂಬೋಡಿ ಗಾ.ಪಂ. ಅಧ್ಯಕ್ಷ ಪ್ರಭಾಕರ್ ಹುಲಿಮೇರು, ಗುಂಡೂರಿ ಬಿಜೆಪಿ ಹಿರಿಯ ಕಾರ್ಯಕರ್ತ ನೋಣಯ್ಯ ಪೂಜಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಗ್ರಾಮದ 41 ಕುಟುಂಬಗಳಿಗೆ ಗ್ಯಾಸ್ ವಿತರಿಸಲಾಯಿತು. ಪ್ರವೀಣ್ ಸ್ವಾಗತಿಸಿ, ದಯಾನಂದ್ ನಡುಕುಮೇರು ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.