ಧರ್ಮಸ್ಥಳದ ಮುಖೇನ 100 ಕೆರೆಗಳ ಅಭಿವೃದ್ಧಿ: ಸಚಿವ ರೇವಣ್ಣ ಚಾಲನೆ

Advt_NewsUnder_1
Advt_NewsUnder_1
Advt_NewsUnder_1
ಚೆನ್ನಮ್ಮ ದೇವೇಗೌಡ ಬೆಳ್ಳಿ ದೀಪ ಬೆಳಗಿಸಿ ಮಹೋತ್ಸವಕ್ಕೆ ಚಾಲನೆ ನೀಡಿದರು

ಎಚ್.ಡಿ. ರೇವಣ್ಣ ಭಗವಾನ್‌ ಬಾಹುಬಲಿ ಸ್ವಾಮಿಗೆ ಪ್ರಾರ್ಥನೆ ಸಲ್ಲಿಸಿದರು.

ಧರ್ಮಸ್ಥಳ: ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನುಷ್ಠಾನಕ್ಕೆ ಮುಂದಾಗಿರುವ ಕೆರೆ ಸಂಜೀವಿನಿ ಕಾರ್ಯಕ್ರಮಕ್ಕೆ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಫೆ.8 ರಂದು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಸಮಾಜಮುಖೀ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಮಾದರಿ ಹಾಗೂ ಆದರ್ಶ. ಈಗ ಕೆರೆ ಸಂಜೀವಿನಿ ಯೋಜನೆಯನ್ನು ಅನುಷ್ಠಾನಿಸುವ ಸಂಕಲ್ಪ ತೊಟ್ಟಿರುವುದು ಅತ್ಯಂತ ಆದರ್ಶ ಕಾರ್ಯ ಎಂದು ಶ್ಲಾಘಿಸಿದರು. ಧರ್ಮಸ್ಥಳದಲ್ಲಿ ರಸ್ತೆ ಅಭಿವೃದ್ಧಿಗಾಗಿ ಈಗಾಗಲೇ 23 ಕೋಟಿ ರೂ. ಮಂಜೂರು ಮಾಡಿದ್ದು ಕಾಮಗಾರಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಹೈಮಾಸ್ಟ್ ವಿದ್ಯುದ್ದೀಪ ಅಳವಡಿಕೆಗಾಗಿ ಎರಡು ಕೋಟಿ ರೂ. ಮಂಜೂರು ಮಾಡಿದ್ದು ಕೆಲಸ ಈಗಾಗಲೇ ಪ್ರಾರಂಭಿಸಲಾಗಿದೆ ಎಂದರು.
ಭಕ್ತಾದಿಗಳ ಅನುಕೂಲಕ್ಕಾಗಿ ಧರ್ಮಸ್ಥಳವನ್ನು ಸಂಪರ್ಕಿಸುವ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ.
ಹೆಗ್ಗಡೆಯವರ ಸಲಹೆಯಂತೆ ಸರ್ಕಾರದ ಸಹಭಾಗಿತ್ವದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ನೂರು ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಸಚಿವರು ಪ್ರಕಟಿಸಿದರು.

ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಶಾಶ್ವತ ಯೋಜನೆಯಡಿಯಲ್ಲಿ ಕೆರೆ ಸಂಜೀವಿನಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. 28 ಕೋ.ರೂ. ವೆಚ್ಚದಲ್ಲಿ 100 ಕೆರೆಗಳ ಅಭಿವೃದ್ಧಿಯ ಗುರಿಯಿದೆ. ಇದರಲ್ಲಿ 16 ಕೋ.ರೂ.ಗಳನ್ನು ಶ್ರೀ ಕ್ಷೇತ್ರದಿಂದ ನೀಡಲಾಗುತ್ತಿದ್ದು, ಉಳಿದ ಮೊತ್ತವನ್ನು ಸರಕಾರದ ವತಿಯಿಂದ ನೀಡಲಾಗುತ್ತಿದೆ. ಮುಂದೆ 100 ಕೆರೆಗಳ ಅಭಿವೃದ್ಧಿಯ ಗುರಿ ಇದೆ ಎಂದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.