ಧರ್ಮಸ್ಥಳದಲ್ಲಿ ಜನಕಲ್ಯಾಣ ಕಾರ್ಯಕ್ರಮಗಳ ಉದ್ಘಾಟನೆ

ಸರ್ಕಾರದ ಸಹಯೋಗದೊಂದಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಯೋಜಿಸಿದ ಕೆರೆ ಸಂಜೀವಿನಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು .

 

ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಆಶೀರ್ವಚನ ನೀಡಿದರು.

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಯುಕ್ತ ಜನಕಲ್ಯಾಣ ಕಾರ್ಯಕ್ರಮ ಫೆ.9 ರಂದು ಧರ್ಮಸ್ಥಳ ಅಮೃತವರ್ಷಿನಿ ಸಭಾಭವನದಲ್ಲಿ ಜರುಗಿತು.
ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಆಶೀರ್ವಚನ ನೀಡಿದರು. ಡಾ| ಡಿ.ವೀರೇಂದ್ರ ಹೆಗ್ಗಡೆಯವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಕರ್ನಾಟಕದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಸಣ್ಣ ನೀರಾವರಿ ಸಚಿವ ಸಿ.ಎಸ್ ಪುಟ್ಟರಾಜು, ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ್, ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಕೇಂದ್ರ ಸಚಿವ ಡಿ.ವಿ ಸದಾನಂದ ಗೌಡ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕರಾದ ಕೆ.ಹರೀಶ್ ಕುಮಾರ್, ಎಸ್ ಯಲ್ ಭೋಫಜೇ ಗೌಡ, ಬಿ.ಎಂ ಫಾರೂಕ್, ಹರ್ಷೇಂದ್ರ ಕುಮಾರ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ  ನಿರ್ದೇಶಕ  ಎಲ್ ಮಂಜುನಾಥ್  ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕದ ಅಂಗವಾಗಿ ಆಯೋಜಿಸಿದ ಜನಕಲ್ಯಾಣ ಕಾರ್ಯಕ್ರಮದ ಅಂಗವಾಗಿ  ಯೋಜಿಸಲಾದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.