HomePage_Banner_
HomePage_Banner_

ಧರ್ಮಸ್ಥಳ ಮಾಧ್ಯಮ ಕೇಂದ್ರ ಉದ್ಘಾಟನೆ

 ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ಮಾಧ್ಯಮ ಕೇಂದ್ರ ಉದ್ಘಾಟಿಸಿದರು.

ಧರ್ಮಸ್ಥಳದಲ್ಲಿ ನಡೆಯುವ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಫೆ.8 ರಂದು ಮಾಧ್ಯಮ ಕೇಂದ್ರವನ್ನು ಪ್ರಾಥಮಿಕ ಶಾಲೆಯಲ್ಲಿ ಶತಾಯುಷಿ ಮಿಜಾರು ಗುತ್ತು ಆನಂದ ಆಳ್ವ ಉದ್ಘಾಟಿಸಿ ಶುಭ ಹಾರೈಸಿದರು.
ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮಸ್ತಕಾಭಿಷೇಕದ ಬಗ್ಯೆ ಮಾಧ್ಯಮಗಳು ನೀಡಿದ ವ್ಯಾಪಕ ಪ್ರಚಾರ ಅದ್ಭುತವಾಗಿದೆ ಎಂದು ಸಂತೋಷ ಮತ್ತು ಅಚ್ಚರಿ ವ್ಯಕ್ತಪಡಿಸಿದರು. ಕಾರ್ಕಳದಲ್ಲಿ ಬಾಹುಬಲಿ ಮೂರ್ತಿ ಕೆತ್ತನೆ, ರಸ್ತೆ ಮೂಲಕ ಧರ್ಮಸ್ಥಳಕ್ಕೆ ಸಾಗಾಣಿಕೆ, ಪ್ರತಿಷ್ಠಾಪನೆ ಮತ್ತು ಮಹಾಮಸ್ತಕಾಭಿಷೇಕದ ಬಗ್ಯೆ ಸಮಗ್ರ ವರದಿ ಹಾಗೂ ಮಾಹಿತಿ ಪ್ರಕಟಿಸಿರುವುದಕ್ಕೆ ಮೆಚ್ಚುಗೆ ವ್ಯಕ್ತ ಪಡಿಸಿದರು.
ವೈ-ಫೈಯೊಂದಿಗೆ ಸುಸಜ್ಜಿತ ಮಾಧ್ಯಮ ಕೇಂದ್ರ ರೂಪಿಸಿದ್ದು, ಮಾಧ್ಯಮದವರು ಇದರ ಸದುಪಯೋಗ ಪಡೆಯಬೇಕೆಂದು ಹೆಗ್ಗಡೆಯವರು ಸಲಹೆ ನೀಡಿದರು.
ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್, ಡಾ. ಬಿ. ಯಶೋವರ್ಮ, ಡಿ. ಶ್ರೇಯಸ್ ಕುಮಾರ್, ನಿಶ್ಚಲ್ ಕುಮಾರ್, ಪೂರಣ್ ವರ್ಮ, ಅಭಿಜಿತ್ ಮೂಡಬಿದ್ರೆ, ಬೆಳ್ತಂಗಡಿ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಯನ್. ಪೂವಣಿ, ಎಸ್.ಡಿ.ಎಂ. ಕಾಲೇಜಿನ ಪ್ರೊ. ಭಾಸ್ಕರ ಹೆಗ್ಡೆ, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ. ಭಾಸ್ಕರ ಹೆಗ್ಡೆ ಸ್ವಾಗತಿಸಿದರು. ಅಭಿಜಿತ್  ಮೂಡಬಿದ್ರೆ ಧನ್ಯವಾದವಿತ್ತರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.