HomePage_Banner_
HomePage_Banner_
HomePage_Banner_

ಉಜಿರೆಯಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸೌಹಾರ್ದ ಸಹಕಾರಿ ಸಂಘ ಉದ್ಘಾಟನೆ

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿದರು.

ಬೆಳ್ತಂಗಡಿ: ತಾಲೂಕಿನಲ್ಲಿ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಸಮಾಜವನ್ನು ಸಧೃಡ ಸಂಘಟನೆಯಾಗಿ ಕಟ್ಟುವುದರ ಜೊತೆಗೆ ಆರ್ಥಿಕ ಸಬಲೀಕರಣದ ಉದ್ಧೇಶವಿಟ್ಟು ಸಮಾಜದ ಇತರರಿಗೂ ಸೇವೆಯನ್ನು ಒದಗಿಸುವ ಸದುದ್ಧೇಶದೊಂದಿಗೆ ಸ್ಥಾಪಿತವಾಗಿರುವ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ನಿಯಮಿತ ಸಂಸ್ಥೆಯ ಕೇಂದ್ರ ಕಚೇರಿ ಉದ್ಘಾಟನೆ ಫೆ.11 ರಂದು ಉಜಿರೆಯಲ್ಲಿ ಜರುಗಿತು.

ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಜಗದ್ಗುರು ಡಾ| ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿದರು. ಮಂಗಳೂರು ಶಾಖಾಮಠದ ಪೀಠಾಧಿಪತಿಗಳಾದ ಶ್ರೀ   ಧರ್ಮಪಾಲನಾಥ ಸ್ವಾಮೀಜಿಯವರು ಭದ್ರತಾ ಕೊಠಡಿಯನ್ನು ಉದ್ಘಾಟಿಸಿದರು. ಮಾಜಿ ಸಚಿವ ಗಂಗಾಧರ ಗೌಡ  ಕಾರ್ಯಕ್ರಮದ ಅಧ್ಯಕ್ಷತೆ  ವಹಿಸಿದ್ದರು.

 ಉದ್ಘಾಟನೆ ನಿಮಿತ್ತ ಸ್ವಾಮೀಜಿದ್ವಯರನ್ನು ಉಜಿರೆ ಜನಾರ್ದನ ದೇವಸ್ಥಾನದಿಂದ ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು.  ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ಆನುವಂಶೀಯ  ಆಡಳಿತ ಮೊಕ್ತೇಸರರಾದ  ಯು.ವಿಜಯರಾಘವ ಪಡುವೆಟ್ನಾಯ ಮೆರವಣಿಗೆಯ  ಉದ್ಘಾಟನೆ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಜೆ.ನಾಗರಾಜ್ ಬೆರವಳ್ಳಿ, ಚಿಕ್ಕಮಗಳೂರು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಕಚ್ಚೋಡಿ ಶ್ರೀನಿವಾಸ ಗೌಡ, ಕರ್ನಾಟಕ ಮಹಿಳಾ ಸಹಕಾರಿ ಬ್ಯಾಂಕ್ ಅಧ್ಯಕ್ಷೆ ಕು| ಬಿ.ಸಿ ಗೀತಾ, ದ.ಕ-ಕೊಡಗು ಅಭಿವೃದ್ಧಿ ಸಂಘದ ಅಧ್ಯಕ್ಷ ನಿತ್ಯಾನಂದ ಮುಂಡೊಡಿ, ದ.ಕ ಗೌಡ ವಿದ್ಯಾ ಸಂಘದ ಅಧ್ಯಕ್ಷ ಧನಂಜಯ ಅಡ್ಪಂಗಾಯ, ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಜಿ. ಸೋಮೇಗೌಡ, ಸುಳ್ಯ ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಮೋಹನ್‌ರಾಮ್ ಸುಲ್ಲಿ, ಪುತ್ತೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಶಿವರಾಮ ಹೆಚ್.ಡಿ, ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಮೋಹನ ಗೌಡ ಕಾಯರ್‌ಮಾರ್, ಮಂಗಳೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಯು.ಬಿ.ಎಸ್.ಸುಕುಮಾರ್ ಗೌರವ ಉಪಸ್ಥಿತರಿದ್ದರು.
ಸಂಘದ ನೂತನ ಅಧ್ಯಕ್ಷ ರಂಜನ್ ಜಿ ಗೌಡ, ಉಪಾಧ್ಯಕ್ಷ ಇಚ್ಚಿಲ ಸುಂದರ ಗೌಡ, ನಿರ್ದೇಶಕರಾದ ಕೇಶವ ಗೌಡ ಪಿ, ದಾಮೋದರ ಗೌಡ ಸುರುಳಿ, ಸೇವಾ ಸಂಘದ ಅಧ್ಯಕ್ಷ ಕೇರಿಮಾರ್ ಬಾಲಕೃಷ್ಣ ಗೌಡ, ಪ್ರಮುಖರಾದ ತುಂಗಪ್ಪ ಗೌಡ, ಭರತ್ ಗೌಡ ಬಂಗಾಡಿ, ಯುವ ವಿಭಾಗದ ಅಧ್ಯಕ್ಷ ಸುಧಾಕರ ಗೌಡ, ಸಿಇಒ ದಿನೇಶ್ ಗೌಡ ಕಲ್ಲಾಜೆ  ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.