ಪಡಿತರ ಚೀಟಿ: ಸುಳ್ಳು ಮಾಹಿತಿ ನೀಡಿದವರ ಮೇಲೆ ಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ತಾಲೂಕಿನಲ್ಲಿ ಬಿಪಿಎಲ್ ಪಡಿತರ ಚೀಟಿ ಹೊಂದಲು ಅನರ್ಹವಾಗಿರುವ ಕುಟುಂಬಗಳು ತನಿಖಾ ಸಮಯದಲ್ಲಿ ಸುಳ್ಳು ಮಾಹಿತಿ ನೀಡಿ/ಇಲಾಖಾ ಮಾನದಂಡಗಳನ್ನು ಮರೆಮಾಚಿ ಬಿಪಿಎಲ್ ಪಡಿತರ ಚೀಟಿಗಳನ್ನು ಪಡೆದುಕೊಂಡಿರುವುದು ಕಂಡುಬಂದಿದ್ದು ಇವುಗಳ ತನಿಖೆ ಆರಂಭಗೊಂಡಿದೆ ಎಂದು ತಹಶೀಲ್ದಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

1.ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರಾಕ್ಟರ್,ಮ್ಯಾಕ್ಸಿ ಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತು ಪಡಿಸಿ ನಾಲ್ಕು ಚಕ್ರದ ಬಿಳಿ ಬೋರ್ಡ್ ನ ವಾಹನವನ್ನು ಹೊಂದಿರುವುದು.

2. ಕುಟುಂಬದಲ್ಲಿ ಸರ್ಕಾರಿ ನೌಕರಿದಾರರು ಇರುವುದು

3. ಆದಾಯ ತೆರಿಗೆಯನ್ನು ಪಾವತಿಸುವ ಕುಟುಂಬಗಳು

4. ಕುಟುಂಬವು ಸದ್ರಿ ವಿಳಾಸದಲ್ಲಿ ವಾಸ್ತವ್ಯವಿಲ್ಲದೇ ಇರುವುದು.

5. ಒಂದೇ ಮನೆಯಲ್ಲಿ ವಾಸವಿದ್ದು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವುದು.

6. 7.5 ಎಕರೆಗಿಂತ ಹೆಚ್ಚಿನ ಡಿ ವರ್ಗದ ಅಥವಾ ತತ್ಸಮಾನ ಭೂಮಿ ಹೊಂದಿರುವುದು.

7. ವಾರ್ಷಿಕ 1,20,000 ಕ್ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು

8. ನಗರ ಪ್ರದೇಶದಲ್ಲಿ 1,000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಹೊಂದಿರುವ ಕುಟುಂಬಗಳು

9. ಮರಣ ಹೊಂದಿರುವ ಹೆಸರನ್ನು ಪಡಿತರ ಚೀಟಿಯಿಂದ ತೆಗೆಯದೇ ಇರುವುದು/ಪಡಿತರ ಚೀಟಿಯನ್ನು ರದ್ದುಗೊಳಿಸದೇ ಇರುವುದು.

ಈ ಮೇಲಿನ ಅಂಶಗಳಿಗೆ ಒಳಪಡುವ ಕುಟುಂಬಗಳು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಇಂತಹ ಪಡಿತರ ಚೀಟಿದಾರರು ಸ್ವಯಂ ಪ್ರೇರಿತವಾಗಿ ತಾಲೂಕು ಕಚೇರಿಯ ಆಹಾರ ಶಾಖೆಗೆ ಬಿಪಿಎಲ್/ ಅಂತ್ಯೊದಯ ಪಡಿತರ ಚೀಟಿಗಳ ಮಾಹಿತಿಯನ್ನು ಈ ತಿಂಗಳ ಅಂತ್ಯದೊಳಗೆ ನೀಡತಕ್ಕದ್ದು.
ತಪ್ಪಿದಲ್ಲಿ ಸರ್ಕಾರದ ಆದೇಶ ಸಂಖ್ಯೆ ಎಫ್,ಎಫ್,ಡಿ,೩೨,ಎಒಎಮ್೭೭ ದಿ ೨೩.೦೯.೧೯೭೭ ಹಾಗೂ ಭಾರತ ದಂಡ ಸಂಹಿತೆ ಅಡಿಯಲ್ಲಿ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು.
ತಪ್ಪು ಮಾಹಿತಿ ನೀಡಿ ಪಡಿತರ ಚೀಟಿ ಪಡಕೊಂಡ ಫಲಾನುಭವಿಗಳ ಮಾಹಿತಿಯನ್ನು ಸೂಕ್ತ ದಾಖಲೆ ಸಹಿತ ಆಹಾರ ಶಾಖೆಯಲ್ಲಿ ನೀಡಬಹುದಾಗಿದ್ದು ಇಂತಹ ದೂರುದಾರರ ವಿವರವನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.