ಶ್ರೀರಾಮ್ ಪೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ: ಶ್ರೀರಾಮ್ ಪೌಂಡೇಶನ್ ಇದರ ಪ್ರಾಯೋಜಕತ್ವದಲ್ಲಿ ಶ್ರೀರಾಮ್ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಇದರ ಆಶ್ರಯದಲ್ಲಿ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮವು ಫೆ.16 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ‘ಸುವರ್ಣ ಆರ್ಕೇಡ್ ಸಪ್ತಪದಿ ಸಭಾಭವನ‘ದಲ್ಲಿ ಜರುಗಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ರವಿ ಬಿ.ಎಸ್, ಜಿ.ಪಂ. ಸದಸ್ಯ ಶಾಹುಲ್ ಹಮೀದ್, ವಾಣಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ಕೆ, ಯುವ ಉದ್ಯಮಿ ನಿತ್ಯಾನಂದ ಎನ್, ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಲ್ಯಾನ್ಸಿ ಎ.ಪಿರೇರಾ, ಬೆಳ್ತಂಗಡಿ ಟೆಂಪೋ- ಚಾಲಕ ಮಾಲಕ ಸಂಘದ ಅಧ್ಯಕ್ಷ ವಾಸುದೇವ ರಾವ್, ಮಡಂತ್ಯಾರು ಟೆಂಪೋ -ಚಾಲಕ ಮಾಲಕ ಸಂಘದ ಅಧ್ಯಕ್ಷ ಸುಲೈಮಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಶ್ರೀರಾಮ್ ಟ್ರಾನ್ಸ್ ಪೋರ್ಟ್ ಫೈನಾನ್ಸ್ ಕಂಪೆನಿ ಲಿಮಿಟೆಡ್ ಜನರಲ್ ಮ್ಯಾನೇಜರ್ ಶರಶ್ಚಂದ್ರ ಭಟ್ ಕೆ ಅಧ್ಯಕ್ಷತೆ ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.