HomePage_Banner_
HomePage_Banner_
HomePage_Banner_

ಭಟ್ಟಾರಕರುಗಳಿಂದ ಹೆಗ್ಗಡೆಯವರಿಗೆ ಸನ್ಮಾನ 

Advt_NewsUnder_1
 ಸಮಸ್ತ ಭಟ್ಟಾರಕರುಗಳ ಪರವಾಗಿ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ರತ್ನಗಿರಿಯಲ್ಲಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಸನ್ಮಾನಿಸಿದರು. 

 

ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಫೆ.16 ರಂದು ನಡೆದ ಭಗವಾನ್ ಬಾಹುಬಲಿ ಸ್ವಾಮಿಯ ಚತುರ್ಥ ಮಹಾಮಸ್ತಕಾಭಿಷೇಕದ ಸಂದರ್ಭದಲ್ಲಿ ಸಮಸ್ತ ಭಟ್ಟಾರಕರುಗಳ ಪರವಾಗಿ ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸದ್ಧರ್ಮ ಪರಿಪಾಲಕರು ಬಿರುದು ನೀಡಿ ಸನ್ಮಾನಿಸಿದರು. ಸನ್ಮಾನ ಪತ್ರವನ್ನು ಅರ್ಪಿಸಿದರು.
ಧರ್ಮಸ್ಥಳದಲ್ಲಿ ಬಾಹುಬಲಿ ಮೂರ್ತಿ ಪ್ರತಿಷ್ಠಾಪಿಸಿ ಅಭಿನವ ಚಾವುಂಡರಾಯರಾಗಿ ಚಿರಪರಿಚಿತರಾಗಿರುವಿರಿ. ಧರ್ಮಸ್ಥಳದಲ್ಲಿ ಚತುರ್ಥ ಮಹಾಮಸ್ತಕಾಭಿಷೇಕವನ್ನು ಯಶಸ್ವಿಯಾಗಿ ನಡೆಸಿರುವುದಕ್ಕಾಗಿ ಅಭಿನಂದಿಸಿ ಹೆಗ್ಗಡೆಯವರಿಗೆ ಉಜ್ವಲ ಭವಿಷ್ಯವನ್ನು ಹಾರೈಸುವುದಾಗಿ ಸನ್ಮಾನ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಕೊಲ್ಲಾಪುರದ ಲಕ್ಷ್ಮೀಸೇನ ಭಟ್ಟಾರಕ ಸ್ವಾಮೀಜಿ, ಕಾರ್ಕಳದ ಲಲಿತಕೀರ್ತಿ ಭಟ್ಟಾರಕರು, ಕನಕಗಿರಿಯ ಭುವನಕೀರ್ತಿ ಭಟ್ಟಾರಕರು, ಅರಿಹಂತಗಿರಿಯ ಧವಲಕೀರ್ತಿ ಭಟ್ಟಾರಕರು, ಕಂಬದಹಳ್ಳಿಯ ಭಾನುಕೀರ್ತಿ ಭಟ್ಟಾರಕರು, ಮೂಡಬಿದ್ರೆಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ, ಜಿನಕಂಚಿ ಮಠದ ಲಕ್ಷ್ಮೀಸೇನ ಭಟ್ಟಾರಕರು, ಹೊಂಬುಜ ಜೈನಮಠದ ದೇವೇಂದ್ರಕೀರ್ತಿ ಭಟ್ಟಾರಕರು, ನರಸಿಂಹರಾಜಪುರದ ಲಕ್ಷ್ಮೀಸೇನಾ ಭಟ್ಟಾರಕರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.