HomePage_Banner_
HomePage_Banner_

ಧರ್ಮಸ್ಥಳ: ಪ್ರವಾಸೋಧ್ಯಮ ಸಚಿವ ಸಾ.ರಾ. ಮಹೇಶ್ ಭೇಟಿ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
ಧರ್ಮಸ್ಥಳದ ವತಿಯಿಂದ ಸಚಿವ ಸಾ.ರಾ. ಮಹೇಶ್ ಅವರನ್ನು ಹೆಗ್ಗಡೆಯವರು ಸನ್ಮಾನಿಸಿದರು.

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳವು ಅನ್ನದಾನ, ಅಭಯದಾನ, ವಿದ್ಯಾದಾನ ಮತ್ತು ಔಷಧಿದಾನ ಎಂಬ ಚತುರ್ವಿಧ ದಾನ ಪರಂಪರೆಯೊಂದಿಗೆ ಸಮಾಜಕ್ಕೆ ಅನುಪಮ ಕೊಡುಗೆ ನೀಡಿದೆ. ರಾಜ್ಯದ ಸರ್ವಧರ್ಮೀಯರೂ ಇಲ್ಲಿ ನೆರೆದಿದ್ದಾರೆ. ಈ ರೀತಿಯ ವಿಶಿಷ್ಟ ಆರಾಧನೆ ಅಪೂರ್ವವಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅವರ ಪರವಾಗಿ ಭಕ್ತಿ ಪೂರ್ವಕ ಪ್ರಣಾಮಗಳೊಂದಿಗೆ ತಾನು ಈ ಸಮಾರಂಭದಲ್ಲಿ ಭಾಗವಹಿಸಿ ಶ್ರೀ ಮಂಜುನಾಥ ಸ್ವಾಮಿ ಹಾಗೂ ಭಗವಾನ್ ಬಾಹುಬಲಿಯ ದರ್ಶನ ಮಾಡಿ ಸಂತೋಷಪಟ್ಟಿದ್ದೇನೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಹೇಳಿದರು.
ಅವರು ಫೆ.17 ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಬಾಹುಬಲಿ ಮಹಾಮಸ್ತಕಾಭಿಷೇಕ ವೀಕ್ಷಿಸಿದ ಬಳಿಕ ಮಾತನಾಡಿದರು.
ಇಲ್ಲಿನ ಮೂಲಭೂತ ಸೌಕರ್ಯ ಒದಗಿಸಲು ಬೇಕಾದ ಹಣವನ್ನು ಸರ್ಕಾರದಿಂದ ತಕ್ಷಣ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಪ್ರಕಟಿಸಿದರು. ಅತ್ಯಂತ ಶ್ರದ್ಧಾ-ಭಕ್ತಿಯಿಂದ ಧರ್ಮಸ್ಥಳದ ಸೇವೆಗೆ ಸದಾ ಬದ್ಧರಾಗಿದ್ದೇವೆ ಎಂದು ಅವರು ಭರವಸೆ ನೀಡಿದರು .ಮಾಜಿ ಸಚಿವರುಗಳಾದ ವಿನಯ ಕುಮಾರ್ ಸೊರಕೆ, ಕೆ. ಅಭಯಚಂದ್ರ ಜೈನ್ ಮತ್ತು ಕೃಷ್ಣ ಜೆ. ಪಾಲೇಮಾರ್ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.