ಮುಂಡೂರು ಶ್ರೀ ನಾಗಕಲ್ಲುರ್ಟಿ ಕ್ಷೇತ್ರದಲ್ಲಿ ಕಾಲಾವಧಿ ನೇಮೋತ್ಸವ

Advt_NewsUnder_1
Advt_NewsUnder_1
Advt_NewsUnder_1

ಮುಂಡೂರು: ಕಾರಣಿಕ ಕ್ಷೇತ್ರ ಮುಂಡೂರು ಗ್ರಾಮದ ಶ್ರೀ ನಾಗಕಲ್ಲುರ್ಟಿ ದೈವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಕಾಲಾವಧಿ ನೇಮೋತ್ಸವವು ಜ.12 ಮತ್ತು ಜ.13ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಿತು.
ಫೆ.12ರಂದು ಬೆಳಿಗ್ಗೆ ಗಣಹೋಮ, ನವಕ ಕಲಶ ಅಭಿಷೇಕ, ಮಹಾಪೂಜೆ, ಬಳಿಕ ಶ್ರೀ ನಾಗಬ್ರಹ್ಮ ದೇವರಿಗೆ ತನು ತಂಬಿಲ, ಆಶ್ಲೇಷಬಲಿ, ದೈವಗಳಿಗೆ ಪಂಚಪರ್ವ ಮಧ್ಯಾಹ್ನ ಮಹಾಪೂಜೆ, ಅನ್ನಸಂತರ್ಪಣೆ. ಸಂಜೆ ದುರ್ಗಾಪೂಜೆ, ಬಳಿಕ ಉದ್ಭವ ಮಹಾಗಣಪತಿಗೆ ಮತ್ತು ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಜೋಡುರಂಗಪೂಜೆ ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಿತು. ನಂತರ ಸೇವಾಕರ್ತರಿಗೆ ವಸ್ತ್ರ ವಿತರಣೆ ಕಾರ್ಯಕ್ರಮ ನಡೆದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗಾನಲಹರಿ ಉಪ್ಪಿನಂಗಡಿ ಇವರಿಂದ ಭಕ್ತಿ ರಸಮಂಜರಿ ಜರುಗಿತು.
ಫೆ.13ರಂದು ಬೆಳಿಗ್ಗೆ ಶ್ರೀ ದೇವಿ ನಾಗಾಂಬಿಕಾ ಅಮ್ಮನವರಿಗೆ ಪಂಚಾಮೃತ ಅಭಿಷೇಕ ಮಹಾಪೂಜೆ, ಪ್ರಸಾದ ವಿತರಣೆ, 10 ಕ್ಕೆ ಸಾಮೂಹಿಕ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಮಹಾಪೂಜೆ ಅನ್ನಸಂತರ್ಪಣೆ, ಸಂಜೆ ೫ಕ್ಕೆ ಶ್ರೀದೇವಿ ನಾಗಾಂಬಿಕಾ ಅಮ್ಮನವರಿಗೆ ಮಹಾಪೂಜೆ ಸಂಜೆ ೬ಕ್ಕೆ ಅಮ್ಮನವರ ಉತ್ಸವ ಬಲಿ, ರಾತ್ರಿ ೭ಕ್ಕೆ ದೈವಗಳ ಭಂಡಾರ ತೆಗೆಯುವುದು, ಶ್ರೀ ನಾಗಾಂಬಿಕಾ ಅಮ್ಮನವರ ಉತ್ಸವ ಬಲಿ, ನಂತರ ವಂಶಿಕ ಗೊಂಬೆ ಬಳಗ ಇವರಿಂದ ಕೀಲು ಕುದುರೆ ಮತ್ತು ಗೊಂಬೆ ಕುಣಿತ ಬಳಿಕ ಅನ್ನಸಂತರ್ಪಣೆ ನಡೆಯಿತು.
ರಾತ್ರಿ 10ಕ್ಕೆ ನೇಮೋತ್ಸವ, ಶ್ರೀ ವರಾಹಿ ಮಂತ್ರಮೂರ್ತಿ, ಶ್ರೀ ನಾಗಕಲ್ಲುರ್ಟಿ, ಶ್ರೀ ಶಕ್ತಿದೇವತೆ ದೈವಗಳ ಮತ್ತು ಶ್ರೀ ನಾಗಾಂಬಿಕಾ ಅಮ್ಮನವರ ಭೇಟಿ ಮತ್ತು ಉತ್ಸವ ಬಲಿ. ಪ್ರಾತಃಕಾಲ 6ಕ್ಕೆ ಶ್ರೀ ಗುಳಿಗರಾಜ ದೈವದ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಊರ ಹಾಗೂ ಪರವೂರ ಗ್ರಾಮಸ್ಥರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ದೈವಸ್ಥಾನದ ಆಡಳಿತ ಮೊಕ್ತೇಸರ ರಾಜೀವ್, ಶ್ರೀ ನಾಗಾಂಬಿಕಾ ಭಜನಾ ಮಂಡಳಿ ಅಧ್ಯಕ್ಷ ಸಂತೋಷ್ ಕುಮಾರ್, ಕಾರ್ಯದರ್ಶಿ ಜಯರಾಜ್, ಶ್ರೀ ನಾಗಕಲ್ಲುರ್ಟಿ ಭಕ್ತ ಸಮಿತಿ ಪದಾಧಿಕಾರಿಗಳ ಸಹಕಾರದಲ್ಲಿ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.