ಮಂಜುನಗರ: ಓವರ್‌ಹೆಡ್ ಟ್ಯಾಂಕ್‌ಗೆ ಶಿಲಾನ್ಯಾಸ

ನಾರಾವಿ: ನಾರಾವಿ ಜಿ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬರಬಾರದು. ಅದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ನಾರಾವಿ ಜಿ.ಪಂ. ವ್ಯಾಪ್ತಿಯಲ್ಲಿ 6 ಕ್ಕೂ ಅಧಿಕ ಓವರ್‌ಹೆಡ್ ಟ್ಯಾಂಕ್ ನಿರ್ಮಾಣಕ್ಕೆ ಅನುದಾನ ಒದಗಿಸಲಾಗಿದ್ದು, ಕೆಲವೆಡೆ ನಿರ್ಮಾಣ ಆಗಿದೆ ಎಂದು ನಾರಾವಿ ಜಿ.ಪಂ. ಸದಸ್ಯ ಪಿ. ಧರಣೇಂದ್ರ ಕುಮಾರ್ ಹೇಳಿದರು.
ನಾರಾವಿಯ ಮಂಜುನಗರದಲ್ಲಿ ಜಿ.ಪಂ.ನ ರೂ. 7 ಲಕ್ಷ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಓವರ್‌ಹೆಡ್ ಟ್ಯಾಂಕ್‌ಗೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು. ನಾರಾವಿ ಗ್ರಾ.ಪಂ. ಅಧ್ಯಕ್ಷ ರವೀಂದ್ರ ಪೂಜಾರಿ ಬಾಂದೊಟ್ಟು ಅಧ್ಯಕ್ಷತೆ ವಹಿಸಿದ್ದರು.
ನಾರಾವಿ ಗ್ರಾ.ಪಂ. ಉಪಾಧ್ಯಕ್ಷೆ ಯಶೋದ, ನಾರಾವಿ ಸೂರ್ಯನಾರಾಯಣ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀನಿವಾಸ ಕಿಣಿ, ಗ್ರಾ.ಪಂ. ಸದಸ್ಯರಾದ ಉದಯ ಹೆಗ್ಡೆ, ಸುಜಲತಾ, ರಾಜವರ್ಮ ಜೈನ್, ಕೃಷ್ಣಪ್ಪ ಪೂಜಾರಿ, ಗುತ್ತಿಗೆದಾರ ಅಬ್ದುಲ್ ಖಾದರ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ನಾರಾವಿ ಗ್ರಾ.ಪಂ.ನ ಅಭಿವೃದ್ಧಿ ಅಧಿಕಾರಿ ರವಿ ಎಸ್.ಎಂ. ನಿರ್ವಹಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.