ಬಳಂಜ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ -ನಾಲ್ಕೂರು-ತೆಂಕಕಾರಂದೂರು ಇದರ ನೂತನ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನವು ಸುಮಾರು 60 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದ್ದು ಸರಕಾರದಿಂದ ವಿಶೇಷ ಅನುದಾನ ಬಿಡುಗಡೆಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಪುಟ್ಟರಂಗ ಶೆಟ್ಟಿ ಅವರನ್ನು ಫೆ. 22 ರಂದು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಜಿ.ಪಂ ಸದಸ್ಯ ಧರಣೇಂದ್ರ ಕುಮಾರ್ ಹೊಸಂಗಡಿ, ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.