ಮರೋಡಿ : ಶ್ರೀ ಗುರುಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮ

ಮರೋಡಿ: ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಮರೋಡಿ ಇದರ ಆಶಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 164 ನೇ ಜಯಂತಿಯ ಅಂಗವಾಗಿ ಶ್ರೀ ಗುರು ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಫೆ.24 ರಂದು ಮರೋಡಿ ಪೊಸರಡ್ಕ ದೇವಿಪ್ರಸಾದ್(ಮಹಾಬಲ ಸುವರ್ಣ)ರವರ ಮನೆಯ ವಠಾರದಲ್ಲಿ ಜರುಗಿತು.

ಮರೋಡಿ ಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ನಾರಾಯಣ ಸುವರ್ಣ ಕನರೊಟ್ಟು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮೂಡಬಿದೆರೆ ಆಳ್ವಾಸ್ ಕಾಲೇಜಿನ ಉಪನ್ಯಾಸಕ ಗುಣಪ್ರಸಾದ್ ಕಾರಂದೂರು ಗುರು ಸಂದೇಶ ನೀಡಿದರು. ಮುಖ್ಯ ಅತಿಥಿಗಳಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್, ಕೇಳ-ಮಾಗಣೆ ಗುರಿಕಾರರಾದ ಅಶೋಕ ಕೋಟ್ಯಾನ್ ಪಡ್ಯೋಡಿ, ಬೆಳ್ತಂಗಡಿ ಶ್ರೀ ನಾರಾಯಣಗುರು ಸೇವಾ ಸಂಘದ ನಿರ್ದೇಶಕ ಸಂತೋಷ ಪಿ ಕೋಟ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮರೋಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಕಾರ್ಯದರ್ಶಿ ಯಶೋಧರ ಬಂಗೇರ, ಮರೋಡಿ ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಶಕುಂತಲ, ಕಾರ್ಯದರ್ಶಿ ಸುಮಿತ್ರ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ವಿದ್ಯಾನಂದ ಪೂಜಾರಿ, ಕಾರ್ಯದರ್ಶಿ ಅನಿಲ್, ಸಂಘದ ಪದಾಧಿಕಾರಿಗಳು, ಸರ್ವ ಸದಸ್ಯರು ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.