HomePage_Banner_
HomePage_Banner_

ಅರಣ್ಯದಿಂದ ಒಕ್ಕಲೆಬ್ಬಿಸಲು ಬಿಡುವುದಿಲ್ಲ : ವಸಂತ ಬಂಗೇರ ಗುಡುಗು ಬಾಂಜಾರಿನಲ್ಲಿ ವಸಂತ ಬಂಗೇರರಿಗೆ ಸನ್ಮಾನ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

 

ಬೆಳ್ತಂಗಡಿ : ಸುಪ್ರೀಂ ಕೋರ್ಟ್ ತೀರ್ಪಿನ ಹೆಸರಿನಲ್ಲಿ ಆದಿವಾಸಿಗಳು ಸೇರಿದಂತೆ ಅರಣ್ಯವಾಸಿಗಳನ್ನು ಬಲಾತ್ಕಾರವಾಗಿ ಒಕ್ಕಲೆಬ್ಬಿಸಲು ಅವಕಾಶ ನೀಡುವುದಿಲ್ಲ ಎಂದು ಮಾಜಿ ಶಾಸಕ ಕೆ.ವಸಂತ ಬಂಗೇರ ಹೇಳಿದರು. ಅವರು ಸೋಮವಾರ ಬಾಂಜಾರು ಮಲೆಕುಡಿಯ ಕಾಲನಿಯ ಶ್ರೀ ಗಣಪತಿ ದೇವಸ್ಥಾನದಲ್ಲಿ ಸಾರ್ವಜನಿಕ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಶತಮಾನಗಳಿಂದ ಕಾಡನ್ನು ನಂಬಿ ಜೀವನ ಮಾಡುತ್ತಿರುವ ಆದಿವಾಸಿಗಳು ತೀರ್ಪಿನಿಂದಾಗಿ ಕಂಗಲಾಗಿದ್ದು , ಕೇಂದ್ರ, ರಾಜ್ಯ ಸರ್ಕಾರಗಳು ಈ ಬಗ್ಗೆ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿ ತಾಲೂಕಿನ ಜನರ ಹಿತಾಸಕ್ತಿ ಕಾಪಾಡಲು ಒತ್ತಾಯಿಸುತ್ತೇನೆ ಎಂದ ಅವರು ಬಾಂಜಾರು ಮಲೆಕುಡಿಯ ಕಾಲನಿಯ ಜಮೀನಿನ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಮಾರ್ಚ್ 1 ರಂದು ಮಂಗಳೂರಿನಲ್ಲಿ ಕಂದಾಯ ಸಚಿವರನ್ನು ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ. ಬಾಂಜಾರು ಮಲೆಕುಡಿಯ ಕಾಲನಿಗೆ ಪರ್ಯಾಯ ರಸ್ತೆ ಸೇರಿದಂತೆ ಸೇತುವೆ ನಿರ್ಮಾಣ,ರಸ್ತೆ ಕಾಂಕ್ರೀಟಿಕರಣ ಸೇರಿದಂತೆ ಅಭಿವೃದ್ಧಿ ಯೋಜನೆಗಳಿಗೆ ಹಂತ ಹಂತವಾಗಿ ಅನುದಾನ ದೊರಕಿಸಿಕೊಡುತ್ತೇನೆ ಎಂದರು. ತನ್ನ ಅಧಿಕಾರಾವಧಿಯಲ್ಲಿ ನೆರಿಯ ಗ್ರಾಮದ ಮಲೆಕುಡಿಯ ಸಮುದಾಯದ ಅಭಿವೃದ್ಧಿಗಾಗಿ 25 ಕೋಟಿಗೂ ಹೆಚ್ಚು ಅನುದಾನ ನೀಡಿದ್ದೇನೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ನಮಿತಾ ಪೂಜಾರಿ, ನೆರಿಯ ಗ್ರಾಮ ಪಂಚಾಯತ್ ಅಧ್ಯಕ್ಷ ಪಿ.ಮಹಮ್ಮದ್, ಮಾಜಿ ಅಧ್ಯಕ್ಷ , ಸದಸ್ಯ ಪಿ.ಕೆ ರಾಜನ್ , ಗ್ರಾಮ ಪಂಚಾಯತ್ ಸದಸ್ಯ ಎಂ ಎ ಮಥಾಯಿ , ಮೀನಾಕ್ಷಿ ಬಾಂಜಾರು , ಮಾಜಿ ಸದಸ್ಯ ಸೆಬಾಸ್ಟಿಯನ್ , ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ತಾಲೂಕು ಸಂಚಾಲಕ ಶೇಖರ್ ಲಾಯಿಲ , ಕೋಶಾಧಿಕಾರಿ ನಾಗೇಶ್ ಬಾಂಜಾರು ಉಪಸ್ಥಿತರಿದ್ದರು.

ಮೊದಲಿಗೆ ನವೀನ್ ಬಾಂಜಾರು ಸ್ವಾಗತಿಸಿ , ಎಪಿಎಂಸಿ ಮಾಜಿ ಉಪಾಧ್ಯಕ್ಷ ಲಕ್ಷ್ಮಣ ಆಲಂಗಾಯಿ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.