ಚಾರ್ಮಾಡಿ: ಸಾರ್ವಜನಿಕ ಹಿಂದೂ ರುದ್ರಭೂಮಿ ಮೋಕ್ಷಧಾಮ ಲೋಕಾರ್ಪಣೆ

ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ‘ಮೋಕ್ಷಧಾಮ‘ ಇದರ ಲೋಕಾರ್ಪಣೆ ಮತ್ತು ಸವಲತ್ತುಗಳ ವಿತರಣೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭ

ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು.

ಈ ಸಂಧರ್ಭದಲ್ಲಿ ಗ್ರಾ.ಪಂ.ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ ನಡೆಯಿತು.

ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಹೆಚ್.ಪ್ರಕಾಶ್ ಶೆಟ್ಟಿ ನೊಚ್ಚ ಇವರಿಗೆ ಸನ್ಮಾನ ನಡೆಯಿತು.

ಕಾರ್ಯಕ್ರಮದಲ್ಲಿ  ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು 

ಚಾರ್ಮಾಡಿ: ದ.ಕ ಜಿ.ಪಂ ಮಂಗಳೂರು, ತಾ.ಪಂ ಬೆಳ್ತಂಗಡಿ, ಗ್ರಾ.ಪಂ ಚಾರ್ಮಾಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಚಾರ್ಮಾಡಿ ಇದರ ಆಶ್ರಯದಲ್ಲಿ ಗ್ರಾ.ಪಂ. ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಮತ್ತು ದಾನಿಗಳ ಸಹಕಾರದೊಂದಿಗೆ ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ‘ಮೋಕ್ಷಧಾಮ‘ ಇದರ ಲೋಕಾರ್ಪಣೆ ಮತ್ತು ಸವಲತ್ತುಗಳ ವಿತರಣೆ ಹಾಗೂ ವಿವಿಧ ಕಾಮಗಾರಿಗಳ ಉದ್ಘಾಟನಾ ಸಮಾರಂಭವು ಫೆ.28 ರಂದು ಜರುಗಿತು.
ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಾರ್ಮಾಡಿ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಶೈಲಜಾ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ತಾ.ಪಂ ಉಪಾಧ್ಯಕ್ಷೆ ಶ್ರೀಮತಿ ವೇದಾವತಿ, ತಾ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಟಿ ಸೆಬಾಸ್ಟಿನ್, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ತೋಟತ್ತ್ತಾಡಿ ಸಂತ ಅಂತೋನಿ ಚರ್ಚ್ ಧರ್ಮಗುರುಗಳಾದ ರೆ| ಫಾ| ತೋಮಸ್ ಪಾರೇಕಾಟ್ವಿಲ್, ಉಜಿರೆ ಕ್ಷೇತ್ರದ ಜಿ.ಪಂ ಸದಸ್ಯೆ ನಮಿತಾ ಕೆ., ಚಾರ್ಮಾಡಿ ಕ್ಷೇತ್ರದ ತಾ.ಪಂ ಸದಸ್ಯ ಕೊರಗಪ್ಪ ಗೌಡ, ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಉಪಾಧ್ಯಾಯ, ಚಾರ್ಮಾಡಿ ಎಂ.ಜೆ.ಎಂ. ಖತೀಬ ಮಹಮ್ಮದ್ ಬದ್ರುದ್ದೀನ್ ಫೈಝಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಅಗ್ನೆಸ್, ಚಾರ್ಮಾಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ದಯಾಕರ, ಚಾರ್ಮಾಡಿ ಗ್ರಾ.ಪಂ ಉಪಾಧ್ಯಕ್ಷೆ ಶ್ರೀಮತಿ ರೇವತಿ, ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಪಿ.ಹೆಚ್. ಪ್ರಕಾಶ್ ಶೆಟ್ಟಿ ನೊಚ್ಚ, ಗ್ರಾ.ಪಂ ಸಿಬ್ಬಂದಿವರ್ಗ ಭಾಗವಹಿಸಿ, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.