ಮಾ. 4 ರಂದು ಬಳಂಜ ಬಿಲ್ಲವ ಸಂಘದಲ್ಲಿ ಗುರುಪೂಜೆ

Advt_NewsUnder_1
Advt_NewsUnder_1
Advt_NewsUnder_1

ಬಳಂಜ : ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇಲ್ಲಿ ಸತ್ಯನಾರಾಯಣ ಪೂಜೆ, ಗುರು ಪೂಜೆ, ಸರ್ವೇಶ್ವರೀ ದೇವಿಯ ಪೂಜೆ, ದೀಕ್ಷಾ ಗ್ರಂಥಿ ಧಾರಣೆ ಹಾಗೂ ಧಾರ್ಮಿಕ ಸಭೆಯು ಮಾ.4 ರಂದು ಸಂಘದ ವಠಾರದಲ್ಲಿ ನಡೆಯಲಿದೆ.
ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಎಚ್.ಎಸ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ, ಬಳಂಜ ಸಂಘದ ಗೌರವ ಸಲಹೆಗಾರ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಮಂಗಳೂರು ಶ್ರೀಮಾತಾ ಎಲೆಕ್ಟ್ರಿಕಲ್ ಮಾಲಕ ಜಯ ಪೂಜಾರಿ, ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಸಂತೋಷ್ ಕುಮಾರ್ ಉಪ್ಪಾರು, ಬೆಳ್ತಂಗಡಿ ಮಹಿಳಾ ಬಿಲ್ಲವ ಅಧ್ಯಕ್ಷೆ ರಾಜಶ್ರೀ ರಮಣ್ ಭಾಗವಹಿಸಲಿದ್ದಾರೆ. ಗುಂಡೆಸೆತದಲ್ಲಿ ರಾಜ್ಯ ಮಟ್ಟವನ್ನು ಪ್ರತಿನಿಧಿಸಿದ ಕ್ರೀಡಾಪಟು ಕು| ನಿಶ್ಚಿತಾ ಪೂಜಾರಿ ಯವರಿಗೆ ಸನ್ಮಾನ ನಡೆಯಲಿದೆ ಎಂದು ಸಂಘಟಕರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.