ಕೃಷಿ ಸಮ್ಮಾನ್ ಯೋಜನೆ: ಘೋಷಣೆ ಸಲ್ಲಿಸಲು ಸೂಚನೆ

Advt_NewsUnder_1
Advt_NewsUnder_1

ಬೆಳ್ತಂಗಡಿ: ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ ಯೋಜನೆಯಡಿ ರೂ.6 ಸಾವಿರಗಳ ಸಹಾಯಧನ ಪಡೆಯಲು ರೈತರು ಸರ್ಕಾರಿ ಸ್ವಾಮ್ಯದ ಕೇಂದ್ರಗಳಾದ ಪಂಚಾಯತು ಮಟ್ಟದಲ್ಲಿ ಬಾಪೂಜಿ ಸೇವಾ ಕೇಂದ್ರ, ಹೋಬಳಿ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರ ಮತ್ತು ಅಟಲ್ ಜಿ ಜನಸ್ನೇಹಿ ಕೇಂದ್ರಗಳಲ್ಲಿ ಭೌತಿಕ ಘೋಷಣೆ ಅಥವಾ ವಿದ್ಯುನ್ಮಾನ ಘೋಷಣೆಯನ್ನು ಸಲ್ಲಿಸಬಹುದು ಎಂದು ಬೆಳ್ತಂಗಡಿ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರೈತರು ಜಮೀನಿನ ಪಹಣಿ ಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆ ವಿವರ, ಫೋಟೋ, ಜಾತಿ ಪ್ರಮಾಣ ಪತ್ರ (ಪ.ಜಾತಿ ಮತ್ತು ಪ.ಪಂಗಡ ಮಾತ್ರ), ಸಂಬಂಧಿಸಿದ ಗ್ರಾಮ ಲೆಕ್ಕಿಗರಿಂದ ಸಣ್ಣ, ಅತೀ ಸಣ್ಣ ರೈತರ ದೃಢೀಕರಣ ಸಹಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಯನ್ನು ರೈತ ಸಂಪರ್ಕ ಕೇಂದ್ರಗಳಾದ ಬೆಳ್ತಂಗಡಿ-233683 ಕೊಕ್ಕಡ-254455 ವೇಣೂರು-286862  ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.