HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಸಿದ್ಧಾಂತ ಕೀರ್ತಿ ಪ್ರಶಸ್ತಿಗೆ ಡಾ. ಎಸ್.ಡಿ. ಶೆಟ್ಟಿ ಆಯ್ಕೆ

ಉಜಿರೆ: ಸ್ಥಳೀಯ ಎಸ್.ಡಿ.ಎಂ. ಕಾಲೇಜಿನಲ್ಲಿರುವ ಡಾ. ಹಾಮಾನಾ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ. ಎಸ್.ಡಿ. ಶೆಟ್ಟಿ ರವರು ಹೊಂಬುಜ ಜೈನ ಮಠದಿಂದ ನೀಡಲಾಗುವ ಸಿದ್ದಾಂತ ಕೀರ್ತಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ .
ಈ  ಪ್ರಶಸ್ತಿ 35000/-ರೂ. ನಗದು ಮತ್ತು ಫಲಕವನ್ನೊಳಗೊಂಡಿದ್ದು ಮಾ.26 ರಂದು ಹೊಂಬುಜ ಜೈನಮಠದಲ್ಲಿ ನಡೆಯುವ ಧಾಮಿಕ ಸಭೆಯಲ್ಲಿ ಪ್ರಶಸ್ತಿ ನೀಡಿ ಡಾ. ಎಸ್.ಡಿ. ಶೆಟ್ಟಿ ಅವರನ್ನು ಗೌರವಿಸಲಾಗುವುದು ಎಂದು ಹೊಂಬುಜ ಜೈನ ಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ತಿಳಿಸಿದ್ದಾರೆ.
ಉಜಿರೆಯಲ್ಲಿ ಎಸ್.ಡಿ.ಎಂ. ಕಾಲೇಜಿನಲ್ಲಿ 30 ವರ್ಷಗಳ ಕಾಲ ಕನ್ನಡ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಎಸ್.ಡಿ. ಶೆಟ್ಟಿಯವರು  ಮೂಲತಃ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹಳದೀಪುರ ನಿವಾಸಿ. ಕನ್ನಡ ಸಾಹಿತ್ಯ, ಸಂಶೋಧನೆ, ವಿಮರ್ಶೆ, ಗ್ರಂಥ ಸಂಪಾದನೆ, ಶಾಸನ ಅಧ್ಯಯನದಲ್ಲಿ ಪರಿಣತರು.

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.