ಮುಗುಳಿ ವಿದ್ಯಾರ್ಥಿನಿ ವಸತಿ ನಿಲಯದ ಶಿಲಾನ್ಯಾಸ

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ಡಿ. ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಬೆಳ್ತಂಗಡಿ ಕೇಂದ್ರ ಸ್ಥಾನದ ಮೂರು ಅಂತಸ್ಥಿನ ನೂತನ ಕಟ್ಟಡದ ಶಿಲಾನ್ಯಾಸವನ್ನು ಮಾ.8 ರಂದು ಶಾಸಕ ಹರೀಶ್ ಪೂಂಜ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ಜಯಾನಂದ ಗೌಡ, ಲೋಕೇಶ, ಶರತ್ ಕುಮಾರ್, ತುಳಸಿ ಕರುಣಾಕರ್, ಗೌರಿ, ರಜನಿ ಕುಡ್ವ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಇಂಜಿನಿಯರ್ ಮಹಾವೀರ ಆರಿಗ, ಉದ್ಯಮಿ ರಾಜೇಶ್ ಶೆಟ್ಟಿ ನವಶಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಸುರೇಂದ್ರ, ಮೇಲ್ವಿಚಾರಕ ಎಸ್.ಆರ್ ನಾಯಕ್ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.