ಬೆಳಾಲು: ಇಲ್ಲಿಯ ಅನಂತೋಡಿಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಅನಂತಪದ್ಮನಾಭ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ , ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರು ಮಾ.8 ರಂದು ಭೇಟಿ ನೀಡಿ ದೇವಸ್ಥಾನದ ಕಾಮಗಾರಿಗಳನ್ನು ವೀಕ್ಷಿಸಿ, ಮೆಚ್ಚುಗೆ ವ್ಯಕ್ತಪಡಿಸಿ, ಸಲಹೆ ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್, ಕಾಯಾಧ್ಯಕ್ಷ ಪಿ. ತಿಮ್ಮಪ್ಪ ಗೌಡ, ಬ್ರಹ್ಮಕಲಶೊತ್ಸವ ಸಮಿತಿಯ ಕಾರ್ಯಾಧ್ಯಕ್ಷ ಎನ್.ಜತ್ತನ್ನ ಗೌಡ, ಪ್ರಧಾನ ಕಾರ್ಯದರ್ಶಿ ಗಿರೀಶ್ ಬಾರಿತ್ತಾಯ ಪಾರಳ, ಜೀರ್ಣೋದ್ಧಾರ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್, ಸಮಿತಿಯ ಸದಸ್ಯರುಗಳು, ಶ್ರೀ ಅನಂತೇಶ್ವರ ಭಜನಾ ಮಂಡಳಿಯ ಪದಾಧಿಕಾರಿಗಳು , ಸದಸ್ಯರು, ಊರವರು ಉಪಸ್ಥಿತರಿದ್ದು, ಹೆಗ್ಗಡೆಯವರನ್ನು ಸ್ವಾಗತಿಸಿದರು.