ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

 ಧರ್ಮಸ್ಥಳದಲ್ಲಿ ಶನಿವಾರ ಮೈಸೂರು ಮತ್ತು ಚಾಮರಾಜನಗರ ಜೈನ ಸಮಾಜದ ವತಿಯಿಂದ ಭಗವಾನ್ ಶ್ರೀ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯಿತು 

ಕನಕಗಿರಿ ಭುವನಕೀರ್ತಿ ಭಟ್ಟಾರಕ ಸಾಮೀಜಿಯವರನ್ನು ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು. 

ಉಜಿರೆ: ಬಾಹುಬಲಿ ತನ್ನ ಜೀವನದಲ್ಲಿ ಸಾಧಿಸಿ ತೋರಿಸಿದ ಅಹಿಂಸೆ, ತ್ಯಾಗ, ವೈರಾಗ್ಯ ಮೊದಲಾದ ಮೌಲ್ಯಗಳಿಂದ ಶಾಂತಿ, ಸಾಮರಸ್ಯ ಸಾಧ್ಯವಾಗುತ್ತದೆ. ಮಾನಸಿಕ ಮಾಲಿನ್ಯ, ವಿಕಾರಗಳು ದೂರವಾದಾಗ ವಿಶ್ವಶಾಂತಿಯೊಂದಿಗೆ ಲೋಕ ಕಲ್ಯಾಣವಾಗುತ್ತದೆ ಎಂದು ಕನಕಗಿರಿ ಜೈನ ಮಠದ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು.
ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಾ.9 ರಂದು  ಮೈಸೂರು ಮತ್ತು ಚಾಮರಾಜನಗರ ಜೈನ ಸಮಾಜದ ವತಿಯಿಂದ ನಡೆದ ಮಹಾಮಸ್ತಕಾಭಿಷೇಕ ಸಂದರ್ಭದಲ್ಲಿ ಅವರು ಮಾತನಾಡಿದರು.
ನೀರು, ಹಾಲು, ಎಳನೀರು, ಅರಿಶಿನ, ಕೇಸರಿ, ಕಷಾಯ, ಕಬ್ಬಿನ ರಸ, ಕಲ್ಕಚೂರ್ಣ, ಶ್ರೀಗಂಧ, ಚಂದನ ಅಷ್ಟಗಂಧ ಮೊದಲಾದ ಮಂಗಲ ದ್ರವ್ಯಗಳಿಂದ ಬಾಹುಬಲಿ ಸ್ವಾಮಿಗೆ 1008 ಕಲಶಗಳಿಂದ ಮಹಾಮಸ್ತಕಾಭಿಷೇಕ ನಡೆಯಿತು.
ಪೂರ್ಣ ಕುಂಭಾಭಿಷೇಕ, ಮಹಾ ಮಂಗಳಾರತಿ, ಶಾಂತಿ ಮಂತ್ರ ಪಠಣದೊಂದಿಗೆ ಮಸ್ತಕಾಭಿಷೇಕ ಸಮಾಪನಗೊಂಡಿತು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಕನಕಗಿರಿ ಭುವನಕೀರ್ತಿ ಸ್ವಾಮೀಜಿಯವರನ್ನು ಗೌರವಿಸಿದರು. ಪೂಜ್ಯ ಮುನಿಗಳಾದ ಆದಿತ್ಯ ಸಾಗರ್ ಮುನಿ ಮಹಾರಾಜ್ ಮತ್ತು ಸಹಜ ಸಾಗರ್ ಮುನಿ ರಾಜ, ಸೋಂದಾ ಮಠದ ಭಟ್ಟಾಕಲಂಕ ಸ್ವಾಮೀಜಿ ಮತ್ತು ತಮಿಳುನಾಡು ಅರಿಹಂತಗಿರಿಯ ಧವಳಕೀರ್ತಿ ಭಟ್ಟಾರಕರು , ಹೇಮಾವತಿ ವಿ, ಹೆಗ್ಗಡೆ, ಡಿ. ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್  ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.