ಮತದಾನ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ

Advt_NewsUnder_1
Advt_NewsUnder_1

ಬೆಳ್ತಂಗಡಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮಂಗಳೂರು ಹಾಗೂ ಎಲ್ಲಾ ಸಂಘ-ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 2019 ನೇ ಸಾಲಿನ ಲೋಕಸಭಾ ಚುನಾವಣೆಯ ಪ್ರಯುಕ್ತ ಮತದಾನ ಜಾಗೃತಿಗಾಗಿ ತ್ರಿಚಕ್ರ ವಾಹನ ರ್‍ಯಾಲಿ ಹಾಗೂ ನಡಿಗೆ ಜಾಥಾ ಮಾ.8 ರಂದು ಬೆಳ್ತಂಗಡಿಯಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಸ್ವೀಪ್ ನೋಡೆಲ್ ಅಧಿಕಾರಿ ಸುಧಾಕರ್, ಜಿಲ್ಲಾ ಅಂಗವಿಕಲ ಕಲ್ಯಾಣ ಇಲಾಖೆಯ ಸಂಯೋಜಕ ಸುಬ್ರಹ್ಮಣ್ಯ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸಿಡಿಪಿಒ ಪ್ರಿಯಾ ಆಗ್ನೇಸ್, ತಾಲೂಕು ಸಂಯೋಜಕ ಜಯಾನಂದ, ತಾಲೂಕು ಪುನರ್ವಸತಿ ಕಾರ್ಯಕರ್ತ ಜೋನ್ ಬ್ಯಾಪಿಸ್ಟ್, ಗ್ರಾಮ ಪಂಚಾಯತು ವ್ಯಾಪ್ತಿಯ ಪುನರ್ವಸತಿ ಕಾರ್ಯಕರ್ತರು, ವಿಕಲಚೇತನರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.