ಚಂದ್ಕೂರು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಸಮಾಲೋಚನಾ ಸಭೆ

ಲಾಯಿಲ: ಇಲ್ಲಿಯ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆಯು ಮಾ.17 ರಂದು ಚಂದ್ಕೂರು ದೇವಸ್ಥಾನದ ವಠಾರದಲ್ಲಿ ನಡೆಯಿತು.
ಸಭೆಯ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ನೆರವೇರಿಸಿದರು. ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದು, ಬ್ರಹ್ಮಕಲಶೋತ್ಸವದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಧನಂಜಯ ಅಜ್ರಿ, ಪ್ರಧಾನ ಕಾರ್ಯದರ್ಶಿ ಧನಂಜಯ ಕುಮಾರ್, ಕಾರ್ಯದರ್ಶಿ ವಸಂತ ಸುವರ್ಣ, ಖಜಾಂಚಿ ಯೋಗೀಶ ಭಿಡೆ, ಸುರ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಸುಭಾಶ್ಚಂದ್ರ, ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ,ಲಾಯಿಲ ಗ್ರಾ.ಪಂ ಅಧ್ಯಕ್ಷೆ ವೀಣಾ ರಾವ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ  ಹಾಗೂ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.