HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೆ

ಪೆರಿಂಜೆ: ಇಲ್ಲಿಯ ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವವು ಮಾರೂರು ಖಂಡಿಗ ರಾಮದಾಸ ಅಸ್ರಣ್ಣರ ನೇತೃತ್ವದಲ್ಲಿ ವಿಧ್ಯುಕ್ತವಾಗಿ ಜರುಗಿತು.
ಮಾ.14ರಂದು ಮದ್ಯಾಹ್ನ ಪೆರಿಂಜೆ ಶ್ರೀ ಪುಷ್ಪದಂತ ಸ್ವಾಮಿ ಬಸದಿಯಲ್ಲಿ ದೇವರಿಗೆ ಪಂಚಾಮೃತಾಭಿಷೇಕ, ಶ್ರೀ ಅಮ್ಮನವರಿಗೆ ವರಹ ಪೂಜೆ ನಡೆದು, ರಾತ್ರಿ ಪಡ್ಯೋಡಿಗುತ್ತಿನಿಂದ ಶ್ರೀ ಕೊಡಮಣಿತ್ತಾಯ ದೈವದ ಭಂಡಾರ ಇಳಿದು, ಪಡ್ಯಾರಬೆಟ್ಟಕ್ಕೆ ಆಗಮಿಸಿ, ಧ್ವಜಾರೋಹಣ, ಬಲಿ, ಚೆಂಡು ಉತ್ಸವ ನಡೆಯಿತು.
ಮಾ.15 ರಂದು ಭೂತಬಲಿ, ಉತ್ಸವ ನಡೆದು, ಮಾ.16 ರಂದು ಅಂಬೊಡಿ, ಬಲಿ, ಉತ್ಸವ, ಹೂವಿನ ಪೂಜೆ, ರಥಾರೋಹಣ ನಡೆಯಿತು. ಮಾ.17 ರಂದು ವರ್ಷಾವಧಿ ಜಾತ್ರೋತ್ಸವದ ಪ್ರಯುಕ್ತ ರಥದಲ್ಲಿ ಮಹಾಪೂಜೆ, ರಥೋತ್ಸವ, ಹೂವಿನ ಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆದು, ರಾತ್ರಿ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ ಜರುಗಿತು. ಮಾ.18  ರಂದು ಧ್ವಜಾವರೋಹಣ ನಡೆದು  ಸಂಪ್ರೋಕ್ಷಣೆ ಪಡ್ಡ್ಯೋಡಿಗುತ್ತಿಗೆ ಭಂಡಾರ ಹಿಂದಿರುಗಿತು. ಊರ -ಪರವೂರ ಭಕ್ತಾದಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ  ಶ್ರೀ ದೈವದ ಕೃಪೆಗೆ ಪಾತ್ರರಾದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.