ಬೆಳ್ತಂಗಡಿ: ಬೆಳ್ತಂಗಡಿ ನಗರ ಬ್ಲಾಕಿನ ಅಸಂಘಟಿತ ಕಾರ್ಮಿಕ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ಕೆ. ಎಚ್ ಖಾಲಿದ್ ಕಕ್ಕ್ಯೇನಾ ಇವರನ್ನು ನೇಮಕ ಮಾಡಿ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಸಮಿತಿ ಜಿಲ್ಲಾ ಅದ್ಯಕ್ಷ ಬಿ. ಎಮ್ ಅಬ್ಬಾಸ್ ಅಲಿ ಅವರು ಆದೇಶ ಹೊರಡಿಸಿದ್ದಾರೆ.
ಇವರ ಅಯ್ಕೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ, ಮಾಜಿ ಸಚಿವ ಕೆ ಗಂಗಾಧರ ಗೌಡ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಶೇಕರ ಅಜ್ರಿ, ಗ್ರಾಮೀಣ ಬ್ಲಾಕ್ ಅಧ್ಯಕ್ಷ ಶ್ರೀನಿವಾಸ ವಿ ಕಿಣಿ, ಜಿ. ಪಂ. ಮಾಜಿ ಸದಸ್ಯ ಶೈಲೇಶ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್ ಇವರ ಶಿಫಾರಸಿನ ಮೇರೆಗೆ ಈ ನೇಮಕ ನಡೆದಿದೆ.
ಉದ್ಯಮಿಯಾಗಿರುವ ಕೆ.ಎಚ್ ಖಾಲಿದ್ ಅವರು ಈ ಹಿಂದೆ ನಗರ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಿತಿ ಅಧ್ಯಕ್ಷರಾಗಿ, ಲಾಲ ಬೂತ್ನಲ್ಲಿ ೧೫ ವರ್ಷಗಳ ಕಾಲ ಅಧ್ಯಕ್ಷರಾಗಿ ಸಹಿತ ದೀರ್ಘ ವರ್ಷಗಳಿಂದ ಪಕ್ಷದ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ.