ಮಾ.29: ನೆರಿಯ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ ವಾರ್ಷಿಕ ಉತ್ಸವ

ನೆರಿಯ: ಇಲ್ಲಿಯ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪನಾ ವಾರ್ಷಿಕ ಉತ್ಸವವು ಬ್ರಹ್ಮಶ್ರೀ ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಮಾ.29 ರಂದು ನಡೆಯಲಿದೆ.
ಅಂದು ಬೆಳಿಗ್ಗೆ ಪುಣ್ಯಾಹ-ಉಷಾಪೂಜೆ, ಗಣಹೋಮ, ಕಲಶಪೂಜೆ, ಕಲಶಾಭಿಷೇಕ, ಮಹಾಪೂಜೆ, ಉತ್ಸವ ಜರುಗಿ ನಂತರ ಸಾರ್ವಜನಿಕ ಅನ್ನಸಂತರ್ಪಣೆ ಜರುಗಲಿದೆ. ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಶ್ರೀ ಕ್ಷೇತ್ರ ಕುಡುಮಡ್ಕದ ಆಡಳಿತ ಮೊಕ್ತೇಸರ ಕೆ.ರಾಘವ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.