ಮಾ.30: ಸಂಚಾರಿ ನ್ಯಾಯಾಲಯಕ್ಕೆ ಚಾಲನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಸಾರ್ವಜನಿಕ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತು, ಕಂದಾಯ ಇಲಾಖೆ ಹಾಗೂ ಇತರ ಸರಕಾರಿ ಇಲಾಖೆಗಳ ಸಹಯೋಗದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕಾನೂನು ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯಕ್ಕೆ ಮಾ.30 ರಿಂದ ಬೆಳ್ತಂಗಡಿಯಲ್ಲಿ ಚಾಲನೆ ದೊರೆಯಲಿದೆ ಎಂದು ವಕೀಲರ ಸಂಘದ ಕಾರ್ಯದರ್ಶಿ ಮನೋಹರ ಕುಮಾರ್ ತಿಳಿಸಿದರು.
ಅವರು ಮಾ.25 ರಂದು ಬೆಳ್ತಂಗಡಿಯಲ್ಲಿ ನೂತನ ನ್ಯಾಯಾಧೀಶರುಗಳಿಗೆ ವಕೀಲರ ಸಂಘದ ವತಿಯಿಂದ ನಡೆದ ಸ್ವಾಗತ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಪ್ರಕಟಿಸಿದರು. ಮಾ.30ರಂದು ಕೋರ್ಟು ಆವರಣದಲ್ಲಿ ರಥ ಹಾಗೂ ಸಂಚಾರಿ ನ್ಯಾಯಾಲಯಕ್ಕೆ ಚಾಲನೆ ನೀಡಲಾಗುತ್ತಿದ್ದು, ಎ.4ರವರೆಗೆ ತಾಲೂಕಿನ ವಿವಿಧ ಕಡೆಗಳಿಗೆ ಸಾಕ್ಷರತಾ ರಥ ಮತ್ತು ಸಂಚಾರಿ ನ್ಯಾಯಾಲಯವು ತೆರಳಿ ಜನರಲ್ಲಿ ಕಾನೂನಿನ ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಿದೆ ಎಂದು ತಿಳಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.