ಬೆಳ್ತಂಗಡಿ: ಬಿಜೆಪಿ ಪೇಜ್ ಪ್ರಮುಖ್ ಕಾರ್ಯಕರ್ತರ ಸಮಾವೇಶ

ಬೆಳ್ತಂಗಡಿ: ಭಾರತೀಯ ಜನತಾ ಪಕ್ಷ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಇದರ ವತಿಯಿಂದ ಪೇಜ್ ಪ್ರಮುಖ್ ಕಾರ್ಯಕರ್ತರ ಸಮಾವೇಶವು ಮಾ.30ರಂದು ಬೆಳ್ತಂಗಡಿ ಜೈನ್‌ಪೇಟೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ಜರುಗಿತು.
ಕಾರ್ಯಕ್ರಮದಲ್ಲಿ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್, ವಿಧಾನಸಭಾ ವಿರೋಧ ಪಕ್ಷದ ಸಚೇತಕ ಸುನೀಲ್ ಕುಮಾರ್ ಕಾರ್ಕಳ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬ್ರಿಜೇಶ್ ಚೌಟ, ಜಿಲ್ಲಾ ಉಸ್ತುವಾರಿ ಪ್ರತಾಪಸಿಂಹ ನಾಯಕ್, ಮಾಜಿ ವಿಧಾನ ಪರಿಷತ್ ಸದಸ್ಯರಾದ ಕ್ಯಾ| ಗಣೇಶ್ ಕಾರ್ಣಿಕ್, ಮೋನಪ್ಪ ಭಂಡಾರಿ, ಮಾಜಿ ಶಾಸಕ ಪ್ರಭಾಕರ ಬಂಗೇರ, ತಾಲೂಕು ಚುನಾವಣಾ ಸಂಚಾಲಕ ಬಾಲಕೃಷ್ಣ ವಿ.ಶೆಟ್ಟಿ ಸವಣಾಲು ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.