ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನದ ಉದ್ಘಾಟನೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ರಥ ಹಾಗೂ ಸಂಚಾರಿ ಜನತಾ ನ್ಯಾಯಾಲಯದ ಅಭಿಯಾನದ ಉದ್ಘಾಟನಾ ಸಮಾರಂಭವು ಮಾ.30 ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ವಕೀಲ ಸಂಘದ ಅಧ್ಯಕ್ಷ ಸೇವಿಯರ್ ಪಾಲೇಲಿ,  ಪ್ರಧಾನ ಕಾರ್ಯದರ್ಶಿ ಮನೋಹರ ಕುಮಾರ್, ಬೆಳ್ತಂಗಡಿ  ಸಹಾಯಕ ಸರ್ಕಾರಿ ಅಭಿಯೋಜಕ ಕಿರಣ್ ಕುಮಾರ್ ಜಿ.ಕೆ ಭಾಗವಹಿಸಿದ್ದರು.
ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಕೆ.ಎಂ.ಅನಂದ ಹಾಗೂ ಹೆಚ್ಚಿವರಿ ಸಿವಿಲ್ ನ್ಯಾಯಾಧೀಶ ಸತೀಶ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಶಿವಯ್ಯ ಎಸ್.ಎಲ್ ನೀರಿನ ಪ್ರಾಮುಖ್ಯತೆ ಹಾಗೂ ಜಲ ಸಂರಕ್ಷಣೆಗೆ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಉಪನ್ಯಾಸ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.