HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ರಾಜ್ಯ ಕುಲಾಲ-ಕುಂಬಾರರ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಕಾರಿಂಜ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಗುರುವಾಯನಕೆರೆ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಹರೀಶ್ ಕಾರಿಂಜ ಅವರು ಕರ್ನಾಟಕ ರಾಜ್ಯ ಕುಲಾಲ-ಕುಂಬಾರರ ಯುವ ವೇದಿಕೆಯ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆಯಾಗಿದ್ದಾರೆ.
ಮಾ.24ರಂದು ಮಂಗಳೂರಿನ ಶ್ರೀ ದೇವಿ ದೇವಸ್ಥಾನದಲ್ಲಿ ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ದಶಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಪೂರ್ವಾಭಾವಿ ಸಭೆಯಲ್ಲಿ ಯುವ ವೇದಿಕೆ ಸ್ಥಾಪಕಾಧ್ಯಕ್ಷ ಡಾ| ಅಣ್ಣಯ್ಯ ಕುಲಾಲ್ ಹಾಗೂ ರಾಜ್ಯಾಧ್ಯಕ್ಷ ತೇಜಸ್ವಿರಾಜ್ ಇವರ ಸೂಚನೆಯಂತೆ ಈ ಆಯ್ಕೆಯನ್ನು ಮಾಡಲಾಯಿತು.
ಹರೀಶ್ ಕಾರಿಂಜ ಅವರು ತಾಲೂಕು ಯುವ ವೇದಿಕೆ ಸ್ಥಾಪಕಾಧ್ಯಕ್ಷರಾಗಿ, ಕುಲಾಲ ಕುಂಬಾರರ ಸಮಾವೇಶ ಮತ್ತು ಹಕ್ಕೋತ್ತಾಯ ಸಮಿತಿಯ ಅಧ್ಯಕ್ಷರಾಗಿ, ನಾವೂರು ನವೋದಯ ಯುವಕ ಮಂಡಲದ ಅಧ್ಯಕ್ಷರಾಗಿ, ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಜೀಣೋದ್ಧಾರ ಸಮಿತಿ ಮತ್ತು ಟ್ರಸ್ಟ್‌ನ ಕಾರ್ಯದರ್ಶಿಯಾಗಿ, ನಡುಬೊಟ್ಟು ಶ್ರೀ ರೌದ್ರನಾಥೇಶ್ವರ ದೇವಸ್ಥಾನದ ಜೋಣೋದ್ಧಾರ ಮತ್ತು ಬ್ರಹ್ಮಕಲಶ, ನಾಗಮಂಡಲದಲ್ಲಿ ಅಪ್ರತಿಮ ಸಂಘಟನೆ ಹಾಗೂ ಹಸಿರುವಾಣಿ ಹೊರಕಾಣಿಕೆಯ ತಾಲೂಕು ಅಧ್ಯಕ್ಷರಾಗಿ, ಇಂದಬೆಟ್ಟು ಅರ್ಧನಾರೀಶ್ವರ ದೇವಸ್ಥಾನದ ಜೀಣೋದ್ಧಾರ ಮತ್ತು ಬ್ರಹ್ಮಕಲಶೋತ್ಸವದಲ್ಲಿ ಮುಖ್ಯ ಪಾತ್ರ ವಹಿಸಿದ್ದರು. ಕರ್ನಾಟಕ ರಾಜ್ಯ ಕುಲಾಲ ಕುಂಬಾರರ ಯುವ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಮಾಡಿದ ಸಾಧನೆಯನ್ನು ಗುರುತಿಸಿ ಅವರನ್ನು ಯುವ ವೇದಿಕೆಯ ರಾಜ್ಯ ಸಮಿತಿಗೆ ಆಯ್ಕೆ ಮಾಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.