ಬೆಳ್ತಂಗಡಿ: ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಸತತ 6ನೇ ಅವಧಿಗೆ ಹಾಗೂ ಉಪಾಧ್ಯಕ್ಷ ರಾಗಿ ವಿನಯ ಕುಮಾರ್ ಸೂರಿಂಜೆ 2ನೇ ಅವಧಿಗೆ ಪುನರಾಯ್ಕೆಗೊಂಡಿದ್ದಾರೆ.
ಎ.2 ರಂದು ಬ್ಯಾಂಕಿನ ಆಡಳಿತ ಮಂಡಳಿ ಸಭೆಯಲ್ಲಿ ಮಂಗಳೂರು ಉಪವಿಭಾಗದ ಆಯುಕ್ತ ರವಿಚಂದ್ರ ನಾಯಕ್ ಚುನಾವಣಾ ಪ್ರಕ್ರಿಯೆ ನಡೆಸಿದರು. ಬ್ಯಾಂಕಿನ ನಿರ್ದೇಶಕರಾದ ಬಿ.ನಿರಂಜನ್, ಟಿ.ಜಿ. ರಾಜರಾಮ ಭಟ್, ಭಾಸ್ಕರ್ .ಎಸ್. ಕೋಟ್ಯಾನ್, ಎಂ. ವಾದಿರಾಜ ಶೆಟ್ಟಿ, ಕೆ.ಎಸ್.ದೇವರಾಜ್, ರಾಜು ಪೂಜಾರಿ, ಶಶಿಕುಮಾರ್ ರೈ.ಬಿ, ದೇವಿಪ್ರಸಾದ್ ಶೆಟ್ಟಿ, ಬೆಳಪು, ಎಸ್.ಬಿ ಜಯರಾಮ್ ರೈ, ಮೋನಪ್ಪ ಶೆಟ್ಟಿ ಎಕ್ಕಾರು, ಬಿ.ಅಶೋಕ್ ಕುಮಾರ್ ಶೆಟ್ಟಿ, ಮಹೇಶ್ ಹೆಗ್ಡೆ, ಕೆ. ಹರಿಶ್ಚಂದ್ರ , ಕೆ. ಜೈರಾಜ್ ಬಿ.ರೈ , ಅಪೆಕ್ಸ್ ಬ್ಯಾಂಕ್ ಪ್ರತಿನಿಧಿ ಸದಾಶಿವ ಉಳ್ಳಾಲ್, ಸಹಕಾರ ಸಂಘಗಳ ಉಪನಿಬಂಧಕ ಸುರೇಶ್ ಗೌಡ, ಸಹಾಯಕ ನಿಬಂಧಕ ಮಂಜುನಾಥ್ ಸಿಂಗ್, ಅಭಿವೃದ್ಧಿ ಅಧಿಕಾರಿ ತ್ರಿವೇಣಿ ರಾವ್, ಬ್ಯಾಂಕಿನ ಸಿಇಒ ರವೀಂದ್ರ .ಬಿ, ಬ್ಯಾಂಕಿನ ಮಹಾ ಪ್ರಬಂಧಕ ಗೋಪಿನಾಥ್ ಭಟ್ ಉಪಸ್ಥಿತರಿದ್ದರು. 1994 ರಲ್ಲಿ ಪ್ರಥಮ ಬಾರಿಗೆ ಬ್ಯಾಂಕಿನ ಅಧ್ಯಕ್ಷರಾಗಿ ಆಯ್ಕೆಯಾದ ರಾಜೇಂದ್ರ ಕುಮಾರ್ 25 ವರ್ಷಗಳ ಕಾಲ ಬ್ಯಾಂಕ್ ಮುನ್ನಡೆಸಿದ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಪ್ರಸಕ್ತ 2019-24 ರ ಅವಧಿಗೆ ಮತ್ತೆ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ಸಹಕಾರಿ ರಂಗದ ದಾಖಲೆಯಾಗಿದೆ. ರಾಜೇಂದ್ರ ಕುಮಾರ್ ಸಾರಥ್ಯದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ತನ್ನ ಉತ್ಕೃಷ್ಠ ಸಾಧನೆಗಾಗಿ 18 ಬಾರಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ, ಸ್ವಸಹಾಯ ಸಂಘಗಳ ಕಾರ್ಯನಿರ್ವಹಣೆಗಾಗಿ 16 ಬಾರಿ ನಬಾರ್ಡ್ ರಾಜ್ಯ ಪ್ರಶಸ್ತಿ ಸಹಿತ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಹಲವು ಪ್ರಶಸ್ತಿಗಳನ್ನು ಪಡೆದಿದೆ.