ಯಂಗ್ ಚಾಲೆಂಜರ್‍ಸ 30 ನೇ ವಾರ್ಷಿಕ ಮಹಾಸಭೆ : ರಾಜ್ಯ ಯುವಜನ ಒಕ್ಕೂಟದ ಕಾರ್ಯದರ್ಶಿ ಸುರೇಶ್ ರೈಗೆ ಅಭಿನಂದನೆ

ಮುಂಡಾಜೆ: ಇಲ್ಲಿನ ಯಂಗ್ ಚಾಲೆಂಜರ್‍ಸ್ ಕ್ರೀಡಾ ಸಂಘದ 30 ನೇ ವರ್ಷದ ವಾರ್ಷಿಕ ಮಹಾಸಭೆ ಮತ್ತು 30 ನೇ ವರ್ಷದಂಗವಾಗಿ ಆಗಬೇಕಾಗಿರುವ ಕಾರ್ಯಕ್ರಮಗಳ ಬಗ್ಗೆ ಸಂಕಲ್ಪ ಕಾರ್ಯಕ್ರಮ, ರಾಜ್ಯ ಯುವಜನ ಒಕ್ಕೂಟಗಳ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಅವರಿಗೆ ಅಭಿನಂದನೆ ಕಾರ್ಯಕ್ರಮ ಮಾ. 30 ರಂದು ಸಂಘದ ಸಭಾಭವನದಲ್ಲಿ ನಡೆಯಿತು.

 ಯುವ ಮಂಡಳಿಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಅವರಿಗೆ ಸನ್ಮಾನ
ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಅಶ್ರಫ್ ಆಲಿಕುಂಞಿ ವಹಿಸಿದ್ದರು. ಸಮಾರಂಭದಲ್ಲಿ ರೇಷ್ಮೆ ಇಲಾಖೆಯ ನಿವೃತ ಅಧಿಕಾರಿ ಬಾಬು ಪೂಜಾರಿ ಕೂಳೂರು,
ವೇದಿಕೆಯಲ್ಲಿ ಸಂಘದ ಕಾರ್ಯದರ್ಶಿ ಶಶಿಧರ ಭಟ್ ಠೋಸರ್ ಉಪಸ್ಥಿತರಿದ್ದರು. ಇನ್ನೊರ್ವ ಕಾರ್ಯದರ್ಶಿ ಸಾಂತಪ್ಪ ಕಲ್ಮಂಜ ವರದಿ ವಾಚಿಸಿದರು. ಸಂಘದ ಸಂಚಾಲಕ ನಾಮದೇವ ರಾವ್ ಕಾರ್ಯಕ್ರಮ ನಿರೂಪಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಶೀನಪ್ಪ ಗೌಡ ವಂದನಾರ್ಪಣೆಗೈದರು.
ಸುರೇಶ್ ರೈ ಅವರಿಗೆ ಅಭಿನಂದನೆ:
ಇದೇ ವೇಳೆ ಸಮಾರಂಭಕ್ಕೆ ವಿಶೇಷ ಆಹ್ವಾನಿತರಾಗಿದ್ದ ಸವಣೂರು ಯುವಕ ಮಂಡಲದ ಅಧ್ಯಕ್ಷರೂ ಆಗಿರುವ ಜಿಲ್ಲಾ ಯುವಜನ ಒಕ್ಕೂಟದ ಅಧ್ಯಕ್ಷ ಹಾಗು ರಾಜ್ಯ ಯುವ ಮಂಡಳಿಗಳ ಒಕ್ಕೂಟದ ಕಾರ್ಯದರ್ಶಿ ಸುರೇಶ್ ರೈ ಸೂಡಿಮುಳ್ಳು ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.