ಉಜಿರೆ: 3 ಅಂಗಡಿಗಳಿಗೆ ಆಕಸ್ಮಿಕ ಬೆಂಕಿ ಅವಘಡ: ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಇಲ್ಲಿಯ ಮಾರಿಗುಡಿ ಸಮೀಪದ ಉಜಿರೆ ಗ್ರಾ.ಪಂ. ವಾಣಿಜ್ಯ ಸಂಕೀರ್ಣದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿ ಸುಟ್ಟು ಭಸ್ಮವಾದ ಘಟನೆ ಎ.9 ರಂದು ರಾತ್ರಿ 3.00 ಗಂಟೆಯ ಸಮಯದಲ್ಲಿ ನಡೆದಿದೆ.
ಈ ದುರ್ಘಟನೆಯಿಂದಾಗಿ ಅಶೋಕ್ ಕುಮಾರ್ ಶೆಟ್ಟಿ ,ಚಿತ್ತರಂಜನ್ ಮಾಲಕತ್ವದ ಅಕ್ಷ ಎಂಟರ್ ಪ್ರೈಸಸ್, ಎಲೆಕ್ಟ್ರಾನಿಕ್ಸ್ ಮತ್ತು ಮೊಬೈಲ್ ಮಳಿಗೆ, ಗಣೇಶ್ ಮಾಲಕತ್ವದ ಗುರು ಕ್ಯಾಂಟೀನ್, ಶರೀಫ್ ಮಾಲಕತ್ವದ ಬಿ.ಎ ಜನರಲ್ ಸ್ಟೋರ್‌ಗೆ ಬೆಂಕಿ ತಗುಲಿದ ಪರಿಣಾಮ 40 ಲಕ ರೂಪಾಯಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು, ಫರ್ನಿಚರ್‍ಸ್, ದಾಖಲೆ ಪತ್ರಗಳು, ಬೆಂಕಿಗಾಹುತಿಯಾಗಿದೆ.
ಸ್ಥಳೀಯರ ಹಾಗೂ ಅಗ್ನಿಶಾಮಕ ದಳದವರ ಸೂಕ್ತ ಕಾರ್ಯಾಚರಣೆಯಿಂದ ಬೆಂಕಿ ನಂದಿಸುವ ಕಾರ್ಯನಡೆಯಿತು. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.