ಎ.21 : ಬಳಂಜದಲ್ಲಿ ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ಶಾಖೆ ಉದ್ಘಾಟನೆ

ಬಳೆಂಜ : ಶ್ರೀ ಬಾಹುಬಲಿ ಕ್ರೆಡಿಟ್ ಸೌಹಾರ್ದ ಸಹಕಾರಿ ನಿ. ಕಾರ್ಕಳ ಇದರ ಬಳಂಜ ಶಾಖೆಯನ್ನು ಎ.21 ರಂದು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಸದಾಶಿವ ರುದ್ರ ದೇವಸ್ಥಾನ ಸುರ್ಯ ಇದರ ಅನುವಂಶಿಯ ಆಡಳಿತ ಮೊಕ್ತೇಸರ ಎಸ್. ಸುಭಾಶ್ಚಂದ್ರ ಸುರ್ಯಗುತ್ತು ಉದ್ಘಾಟಿಸಲಿದ್ದಾರೆ.
ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಂ.ಎಲ್.ಸಿ ಹರೀಶ್ ಕುಮಾರ್, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಸುನೀಲ್ ಕುಮಾರ್ ಬಜಗೋಳಿ, ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅನುವಂಶಿಯ ಆಡಳಿತ ಮೊಕ್ತೇಸರ ಬಿ. ಶೀತಲ್ ಕುಮಾರ್, ಬಳಂಜ ಗ್ರಾ.ಪಂ ಅಧ್ಯಕ್ಷೆ ದೇವಕಿ, ತಾ.ಪಂ ಮಾಜಿ ಸದಸ್ಯ ಧರ್ಣಪ್ಪ ಪೂಜಾರಿ, ಬಳಂಜ ಮಾರುತಿ ಕಾಂಪ್ಲೆಕ್ಸ್‌ನ ಮಾಲಕ ಗುರುಪ್ರಸಾದ್ ಭಾಗವಹಿಸಲಿದ್ದಾರೆ.
2006 ರಿಂದ ಕಾರ್ಕಳ ದಾನಶಾಲೆಯ ಶ್ರೀ ಮಹಾವೀರ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿರುವ ಈ ಸಂಸ್ಥೆ ಈಗಾಗಲೇ ಬೆಳ್ತಂಗಡಿ ಹಾಗೂ ಉಜಿರೆಯಲ್ಲಿ ಶಾಖೆಯನ್ನು ಹೊಂದಿದ್ದು, ಇ-ಸ್ಟ್ಯಾಂಪಿಂಗ್ ಸೌಲಭ್ಯ ನೀಡಲಾಗುತ್ತಿದೆ ಎಂದು ಸಂಸ್ಥೆಯ ಅಧ್ಯಕ್ಷ ನೇಮಿರಾಜ್ ಆರಿಗ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.