ಬೆಳ್ತಂಗಡಿ: ‘ವಿಶ್ವ ಮಹಿಳಾ ದಿನಾಚರಣೆ’ ಪ್ರಯುಕ್ತ ‘ಸಾಂಸ್ಕೃತಿಕ’ ಕಾರ್ಯಕ್ರಮ

ಬೆಳ್ತಂಗಡಿ:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ, ಬಿಲ್ಲವ ಮಹಿಳಾ ವೇದಿಕೆ ಮತ್ತು ಯುವ ಬಿಲ್ಲವ ವೇದಿಕೆ ಇದರ ಆಶ್ರಯದಲ್ಲಿ ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ ಎ.27 ರಂದು ಶ್ರೀ ನಾರಾಯಣಗುರು ವಾಣಿಜ್ಯ ಸಂಕೀರ್ಣದ ಆಶಾ ಸಾಲಿಯಾನ್ ಸಭಾಭವನದಲ್ಲಿ ಜರುಗಿತು.
ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಾಳೆ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಶುಭ ಹಾರೈಸಿದರು. ಬಿಲ್ಲವ ಮಹಿಳಾ ವೇದಿಕೆ ಅಧ್ಯಕ್ಷೆ ರಾಜಶ್ರೀ ವಿ ರಮಣ್, ಕಾರ್ಯದರ್ಶಿ ಪುಷ್ಪಾವತಿ ಎನ್ ನಾವರ, ನಿಕಟಪೂರ್ವ ಅಧ್ಯಕ್ಷೆ ತನುಜಾ ಶೇಖರ್, ಮಾಜಿ ಅಧ್ಯಕ್ಷರುಗಳಾದ ಪ್ರೇಮಾ ಉಮೇಶ್, ವಿನೋದಿನಿ ರಾಮಪ್ಪ, ಸಂಘದ ಕಾರ್ಯದರ್ಶಿ ರಾಕೇಶ್ ಮೂಡುಕೊಡಿ, ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.