ಮೇ.8 ರಿಂದ 13: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ

ಲಾಯಿಲ: ಇಲ್ಲಿಯ ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನವು ಲಾಯಿಲ-ನಡ ಗ್ರಾಮಸ್ಥರ ಹಾಗೂ ಊರ ಪರವೂರ ಭಕ್ತಾದಿಗಳ ಒಗ್ಗೂಡುವಿಕೆಯಲ್ಲಿ ಸುಮಾರು 2.00 ಕೋಟಿ ರೂ ವೆಚ್ಚದಲ್ಲಿ ಮಾಜಿ ಶಾಸಕ ವಸಂತ ಬಂಗೇರ ರವರ ಅಧ್ಯಕ್ಷತೆಯಲ್ಲಿ ಜೀರ್ಣೋದ್ಧಾರಗೊಂಡಿದ್ದು, ಮೇ.8 ರಿಂದ 13 ರ ವರೆಗೆ ಶ್ರೀ ದೇವಿಯ ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವವು ಬ್ರಹ್ಮಶ್ರೀ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ವಿಜೃಂಭಣೆಯಿಂದ ಜರುಗಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹಾಗೂ ಶಾಸಕ ಹರೀಶ್ ಪೂಂಜ ತಿಳಿಸಿದರು.
ಅವರು ಮೇ.2 ರಂದು ಚಂದ್ಕೂರಿನಲ್ಲಿ ಕರೆಯಲಾದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಮೇ.9 ರಿಂದ 13 ರವರೆಗೆ ಪ್ರತೀ ದಿನ ದೇವಸ್ಥಾನದಲ್ಲಿ ಮಂಗಳವಾದ್ಯ, ಭಜನಾ ಕಾರ್ಯಕ್ರಮ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೇ.13 ರಂದು ಬ್ರಹ್ಮಕಲಶೋತ್ಸವದಂದು ಸಂಜೆ 6.00 ಗಂಟೆಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಮಾಣಿಲ ಶ್ರೀ ಧಾಮದ ಶ್ರೀ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಉಜಿರೆ ಜನಾರ್ದನ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಯು.ವಿಜಯ ರಾಘವ ಪಡ್ವೆಟ್ನಾಯ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್, ಮಾಜಿ ಶಾಸಕ ವಸಂತ ಬಂಗೇರ ಹಾಗೂ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರ ಧನಂಜಯ ಅಜ್ರಿ, ಬಿ.ಕೆ ಧನಂಜಯ ರಾವ್, ಬಿ ವಿಠಲ ಶೆಟ್ಟಿ ಲಾಯಿಲ, ಸುಭ್ರಾಯ ಡೋಂಗ್ರೆ, ಗಿರೀಶ್ ಡೋಂಗ್ರೆ, ವಸಂತ ಸುವರ್ಣ ಮತ್ತಿತರರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.