ಅಂಚೆ – ಕುಂಚ ಸ್ಪರ್ಧೆ ಪುರಸ್ಕಾರ ವಿತರಣಾ ಸಮಾರಂಭ

Advt_NewsUnder_1
Advt_NewsUnder_1
Advt_NewsUnder_1

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಲಾದ ಹದಿನೇಳನೆ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆವಿಜೇತರಿಗೆ ಪುರಸ್ಕಾರ ವಿತರಣಾ ಸಮಾರಂಭವು ಮೇ.5 ರಂದು  ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ನಡೆಯಲಿದೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ ಜೈನ್ ತಿಳಿಸಿದ್ದಾರೆ.
ಖ್ಯಾತ ಚಲನಚಿತ್ರ ಕಲಾವಿದ ಡಾ. ಮುಖ್ಯಮಂತ್ರಿ ಚಂದ್ರು ಪುರಸ್ಕಾರ ವಿತರಿಸುವರು. ಖ್ಯಾತ ಚಿತ್ರ ಕಲಾವಿದ ಗಂಜೀಫ ರಘುಪತಿ ಭಟ್ ಶುಭಾಶಂಸನೆ ಮಾಡುವರು. ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.
ಅಂಚೆ ಕಾರ್ಡಿನಲ್ಲಿ ಕುಂಚವಾಡಿಸಿ ಆಕರ್ಷಕ ಚಿತ್ರಗಳನ್ನು ರಚಿಸುವ ರಾಜ್ಯ ಮಟ್ಟದ ಸ್ಪರ್ಧೆಯೇ ಅಂಚೆ-ಕುಂಚ ಸ್ಪರ್ಧೆ. ಕಳೆದ 17 ವರ್ಷಗಳಿಂದ ಈ ಸ್ಪರ್ಧೆ ನಡೆಸುತ್ತಿದ್ದು ಈ ವರೆಗೆ2,09,685  ಮಂದಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.
ಸಮಾರಂಭದ ಕೊನೆಯಲ್ಲಿ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಕುಮಾರಿ ಕಾವ್ಯಶ್ರೀ ಅಜೇರು ಯಕ್ಷಗಾಯನ ಹಾಡುವರು. ಗಂಜೀಫ ರಘುಪತಿ ಭಟ್ ಮತ್ತು ಕುಮಾರಿ ಶಬರಿ ಗಾಣಿಗ ಕುಂಚದಲ್ಲಿ ಚಿತ್ರ ರಚಿಸುವರು. ಉಜಿರೆಯ ಎಸ್.ಡಿ.ಎಂ. ಕಾಲೇಜಿನ ಯಕ್ಷಕಲಾ ತಂಡದ ಕಲಾವಿದರು ನೃತ್ಯ ಪ್ರದರ್ಶನ ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.